ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಪಿಎಫ್‌ಐ ಮುಖಂಡರ ಮನೆ ಮೇಲೆ ಎನ್‌ಐಎ ದಾಳಿ

Last Updated 9 ಡಿಸೆಂಬರ್ 2022, 2:04 IST
ಅಕ್ಷರ ಗಾತ್ರ

ಕಲಬುರಗಿ: ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಗುರುವಾರ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾ (‍ಪಿಎಫ್‌ಐ) ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ನಗರದ ಮುಖಂಡರ ಮನೆ ಮೇಲೆ ದಾಳಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎನ್‌ಐಎ ಅಧಿಕಾರಿಗಳು, 'ತನಿಖೆ ಪ್ರಗತಿಯಲ್ಲಿದೆ' ಎಂದು ಹೇಳಿದ್ದಾರೆ. ಯಾರ ಮನೆ ಮೇಲೆ ದಾಳಿ ಮಾಡಲಾಗಿದೆ ಎಂಬ ವಿವರಗಳನ್ನು ನೀಡಿಲ್ಲ. ಅಲ್ಲದೇ, ಈ ಬಗ್ಗೆ ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿಲ್ಲ.

ಕಳೆದ ಸೆಪ್ಟೆಂಬರ್ 22ರಂದು ಎನ್ಐಎ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಜಿಲ್ಲಾ ಘಟಕದ ಅಧ್ಯಕ್ಷ ಏಜಾಜ್ ಅಲಿ ಮತ್ತು ಖಜಾಂಚಿ ಶಾಹೀದ್ ನಾಸೀರ್ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ ಅವರನ್ನು ಬಂಧಿಸಿತ್ತು. ಆಗ ಪೊಲೀಸರ ನೆರವನ್ನು ಪಡೆದಿತ್ತು.

‘ಎನ್‌ಐಎದವರು ಕಲಬುರಗಿಯಲ್ಲಿ ಗುರುವಾರ ದಾಳಿ ಮಾಡಿರುವ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಕಳೆದ ಬಾರಿ ಮಾಹಿತಿ ನೀಡಿದ್ದರಿಂದ ನಾವು ಭದ್ರತೆ ನೀಡಿದ್ದೆವು’ ಎಂದು ಡಿಸಿಪಿ ಅಡ್ಡೂರು ಶ್ರೀನಿವಾಸಲು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT