ಭಾನುವಾರ, ಆಗಸ್ಟ್ 14, 2022
20 °C

ಕಲಬುರ್ಗಿ ಸೇರಿ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದ ಗಡ್ಕರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ವಿಜಯಪುರ– ಕಲಬುರ್ಗಿ– ಹುಮನಾಬಾದ್‌ ರಾಷ್ಟ್ರೀಯ ಹೆದಾರಿಯೂ ಸೇರಿದಂತೆ ರಾಜ್ಯದ 33 ರಾಷ್ಟೀಯ ಹೆದ್ದಾರಿಗಳ ಯೋಜನೆಗಳಿಗೆ ಶನಿವಾರ ಕೇಂದ್ರ ರಸ್ತೆ ಸಾರಿಗೆ, ರಾಷ್ಟೀಯ ಹೆದ್ದಾರಿ ಹಾಗೂ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಿತೀನ್ ಗಡ್ಕರಿ ಅವರು ವರ್ಚುವಲ್ ಮೀಟಿಂಗ್ ಮೂಲಕ ಚಾಲನೆ ನೀಡಿದರು.

ಇದೇ ವೇಳೆ ಅವರು 25 ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಪೂರ್ಣಗೊಂಡ 8 ಹೆದ್ದಾರಿಗಳನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು. ರಾಜ್ಯದ 33 ರಾಷ್ಟ್ರೀಯ ಹೆದ್ದಾರಿಗಳ 1197 ಕೀ.ಮಿ ಉದ್ದದ ರಸ್ತೆಗೆ ₹ 10,904 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದು 2022ರ ಹೊತ್ತಿಗೆ ಪೂರ್ಣಗೊಳ್ಳಲಿವೆ ಎಂದು  ಸಚಿವರು ತಿಳಿಸಿದರು.

ಹೊಸ ಎಥೆನಾಲ್ ನೀತಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ₹ 22 ಇದ್ದು, ಕೇಂದ್ರ ಸರ್ಕಾರ ₹ 34 ನೀಡಿ ಖರೀದಿಸುತ್ತಿದೆ. ಇದರಿಂದ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದ್ದು, ಇದನ್ನು ತಪ್ಪಿಸಲು ಹೊಸ ಎಥೆನಾಲ್ ಉತ್ಪಾದನೆಗೆ ನೀತಿಯೊಂದನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಕರ್ನಾಟಕದಲ್ಲಿ ಹೆಚ್ಚಿನ ಕಬ್ಬು ಬೆಳೆಯುವುದರಿಂದ ಇಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಿದ್ದು, ಪೆಟ್ರೋಲ್‍ಗೆ ಪರ್ಯಾಯವಾಗಿ ಎಥೆನಾಲ್ ಬಳಕೆಗೆ ಕರ್ನಾಟಕ ಸರ್ಕಾರವು ಮುಂದಾಗಬೇಕು’ ಎಂದರು.

ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಎಂ.ವೈ ಪಾಟೀಲ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ವಿಧಾನ ಪರಿಷತ್‌ ಸದಸಸ್ಯರಾದ ಬಿ.ಜಿ ಪಾಟೀಲ, ಶಶೀಲ್ ಜಿ. ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಎನ್.ಎಚ್.ಎ.ಐ ಅನುಷ್ಠಾಮ ಕಚೇರಿಯ ವ್ಯವಸ್ಥಾಪಕ ಚಾರ್ಲ್ಸ್ ಜೆ., ಇಂಜಿನೀಯರ್ ಪ್ರದೀಪ ಹಿರೇಮಠ ಸೇರಿದಂತೆ ಇನ್ನಿತರ ಅಧಿಕಾರಿಗಳು ಕಲಬುರ್ಗಿಯಿಂದ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು