ಸೋಮವಾರ, ಜೂನ್ 14, 2021
27 °C

ಅಮಾವಾಸ್ಯೆ: ಚಾಮುಂಡೇಶ್ವರಿ ದರ್ಶನ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಆ.19ರ ಬುಧವಾರ ಅಮಾವಾಸ್ಯೆ. ಈ ದಿನದಂದು ಚಾಮುಂಡೇಶ್ವರಿ ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುವ ಸಾಧ್ಯತೆಯಿರುವುದರಿಂದ, ಕೋವಿಡ್–19 ಸೋಂಕು ಹರಡುವಿಕೆ ತಡೆಗಟ್ಟಲಿಕ್ಕಾಗಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

ಅಮಾವಾಸ್ಯೆ ದಿನದಂದು ಬೆಟ್ಟದಲ್ಲಿರುವ ಜನರ ವಾಹನ ಸಂಚಾರಕ್ಕೆ ಮಾತ್ರ ಅವಕಾಶವಿರಲಿದ್ದು, ಖಾಸಗಿ, ಸಾರ್ವಜನಿಕ ವಾಹನ ಸಂಚಾರವನ್ನು ಸಹ ಜಿಲ್ಲಾಧಿಕಾರಿ ನಿಷೇಧಿಸಿದ್ದಾರೆ.

ಚಾಮುಂಡಿ ಬೆಟ್ಟದ ತಪ್ಪಲಲ್ಲಿರುವ ಉತ್ತನಹಳ್ಳಿ ಜ್ವಾಲಾ ತ್ರಿಪುರ ಸುಂದರಿ ದೇವಸ್ಥಾನ ಪ್ರವೇಶ ಹಾಗೂ ದೇವಿ ದರ್ಶನವನ್ನು ಸ್ಥಳೀಯರ ಕೋರಿಕೆಯಂತೆ ಜಿಲ್ಲಾಧಿಕಾರಿ ಆ.19ರ ಅಮಾವಾಸ್ಯೆ ಹಾಗೂ ಆ.21ರ ಸ್ವರ್ಣಗೌರಿ ವ್ರತಾಚರಣೆಯಂದು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.