ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯೇಂದ್ರ, ಸಂತೋಷ್‌ರಿಂದ ಸರ್ಕಾರದಲ್ಲಿ ಹಸ್ತಕ್ಷೇಪವಿಲ್ಲ: ಕಟೀಲ್

Last Updated 19 ಫೆಬ್ರುವರಿ 2020, 14:23 IST
ಅಕ್ಷರ ಗಾತ್ರ

ಕಲಬುರ್ಗಿ: ಸರ್ಕಾರದ ಕಾರ್ಯಕಲಾಪಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಹಸ್ತಕ್ಷೇಪ ‌ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಲ್ಲಿಯೂ ಅಸಮಾಧಾನವಿಲ್ಲ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಈಚೆಗಷ್ಟೇ ಪಕ್ಷದ ಶಾಸಕರಸಭೆ ಮಾಡಿದ್ದೆವು.ಎಲ್ಲರೂ ಬಿಜೆಪಿ ಅಭ್ಯರ್ಥಿ ಪರ ಮತ ಹಾಕಿದ್ದಾರೆ. ನಿನ್ನೆ ಸಭೆ ಸೇರಿ ಬಜೆಟ್‌ನಲ್ಲಿ ಏನೇನು ಸೇರಿಸಬೇಕೆಂದು ಮಾತುಕತೆ ಮಾಡಿದ್ದಾರೆ ಎಂದು ಹೇಳಿದರು.

ಸರ್ಕಾರದಲ್ಲಿ ಯಾರದಾದರೂ ಹಸ್ತಕ್ಷೇಪ ಹಾಗೂ ‌ಗುಂಪುಗಾರಿಕೆ ಬಗ್ಗೆ ಅಸಮಾಧಾನ ಇದ್ದರೆ ರಾಜ್ಯಾಧ್ಯಕ್ಷನಾದ ನನ್ನ ಬಳಿ ಹೇಳಿಕೊಳ್ಳಬೇಕಲ್ಲವೇ ಎಂದು ಪ್ರಶ್ನಿಸಿದರು.

ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು,
ನಮ್ಮ ಪಕ್ಷದಲ್ಲಿ ಎಲ್ಲ ಭಾಗಕ್ಕೂ ಪ್ರಾತಿನಿಧ್ಯ ಸಿಗಲಿದೆ. ಎಲ್ಲ ಭಾಗಕ್ಕೂ ನ್ಯಾಯ ಸಿಗಲಿದೆ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT