ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಚುನಾವಣೆ: ಬಿರುಸು ಪಡೆದ ನಾಮಪತ್ರ ಸಲ್ಲಿಕೆ

Last Updated 23 ಆಗಸ್ಟ್ 2021, 7:01 IST
ಅಕ್ಷರ ಗಾತ್ರ

ಕಲಬುರ್ಗಿ: ಕಲಬುರ್ಗಿ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಇಂದೇ (ಸೋಮವಾರ) ಕೊನೆಯ ದಿನವಾಗಿರುವುದರಿಂದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರ ದಂಡೇ ಚುನಾವಣಾಧಿಕಾರಿಗಳ ಕಚೇರಿಯತ್ತ ಹರಿದು ಬರುತ್ತಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಾರ್ಟಿ, ಕರ್ನಾಟಕ ರಾಷ್ಟ್ರಸಮಿತಿ, ಎಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಿ ನಾಮಪತ್ರ ‌ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಇಂದು ಬೆಳಿಗ್ಗೆ ಎಲ್ಲ 55 ವಾರ್ಡ್ ಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಐದು ವಾರ್ಡ್‌ಗಳಿಗೆ ಒಬ್ಬರಂತೆ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಮಹಿಳೆಯರು ಮಕ್ಕಳೊಂದಿಗೆ ಅಭ್ಯರ್ಥಿಗಳ ಬೆಂಬಲಿಗರಾಗಿ ಚುನಾವಣಾಧಿಕಾರಿ ಕಚೇರಿ ಎದುರು ಸೇರಿದ್ದಾರೆ.

ಡಿಸಿಪಿಗಳಾದ ಅಡ್ಡೂರು ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT