ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಪದ ಬಳಸಿದ ನಟ ನಂದಮೂರಿ ಬಾಲಕೃಷ್ಣನ್ ವಿರುದ್ಧ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್. ರಾಮಚಂದ್ರರಾವ್ ದೂರು ನೀಡಿದ್ದಾರೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಜಯವಾಡದಲ್ಲಿ 12 ಗಂಟೆಗಳ ಕಾಲ ಶುಕ್ರವಾರ ನಡೆಸಿದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಬಾಲಕೃಷ್ಣನ್, ಪ್ರಧಾನಿ ವಿರುದ್ಧ ಟೀಕೆ ಮಾಡಿದ್ದರು.