ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ

Published 10 ಮೇ 2024, 5:37 IST
Last Updated 10 ಮೇ 2024, 5:37 IST
ಅಕ್ಷರ ಗಾತ್ರ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕ್ಷೇತ್ರದ ಚುನಾವಣಾಧಿಕಾರಿಯಾದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಗುರುವಾರ ಅಧಿಸೂಚನೆ ಪ್ರಕಟಿಸಿದರು.

ಅಧಿಸೂಚನೆ ಪ್ರಕಟವಾದ ದಿನದಿಂದ ಮೇ 16ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳ ಪರಿಶೀಲನೆ ಕಾರ್ಯ ಮೇ 17ರಂದು ನಡೆಯಲಿದ್ದು, ಮೇ 20ಕ್ಕೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು,
ಜೂನ್ 6ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಒಂದು ನಾಮಪತ್ರ ಸಲ್ಲಿಕೆ: ಚುನಾವಣಾ ಅಧಿಸೂಚನೆ ಹೊರಡಿಸಿದ ದಿನವೇ ಪಕ್ಷೇತರ ಅಭ್ಯರ್ಥಿ, ಕಲಬುರಗಿಯ ಸಾಮಾಜಿಕ ಹೋರಾಟಗಾರ ಸಾಯಬಣ್ಣಾ ಜಮಾದಾರ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT