ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಗೆಲುವಿಗೆ 380 ಮತಗಳ ಕೊರತೆ

ದ್ವಿತೀಯ ಪ್ರಾಶಸ್ತ್ಯದ ಮತಗಳಲ್ಲಿ ಅಡಗಿದೆ ‘ಅದೃಷ್ಟ’
Last Updated 10 ನವೆಂಬರ್ 2020, 13:18 IST
ಅಕ್ಷರ ಗಾತ್ರ

ಕಲಬುರ್ಗಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯ ಪ್ರಥಮ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಯಾವೊಬ್ಬ ಅಭ್ಯರ್ಥಿಯೂ ನಿಗದಿತ ಕೋಟಾ ತಲುಪಲಿಲ್ಲ. ಹೀಗಾಗಿ ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ನಡೆಸಲಾಗುತ್ತದೆ.

ಈ ಕ್ಷೇತ್ರಕ್ಕೆ ಒಟ್ಟು 21,437 ಮತಗಳು ಚಲಾವಣೆಯಾಗಿದ್ದವು. ಅವುಗಳಲ್ಲಿ 1844 ಮತಗಳು ತಿರಸ್ಕೃತಗೊಂಡಿವೆ. ಒಟ್ಟಾರೆ 19,593 ಮತಗಳು ಕ್ರಮಬದ್ಧವಾಗಿವೆ.

ಒಟ್ಟು ಕ್ರಮಬದ್ಧ ಮತಗಳಲ್ಲಿ ಶೇ 50ಕ್ಕಿಂತ ಹೆಚ್ಚು ಮತ ಪಡೆಯಬೇಕು ಎಂಬುದು ನಿಯಮ. ಅಂದರೆ, ಈ ಕ್ಷೇತ್ರದಲ್ಲಿ ಗೆಲ್ಲಬೇಕಾದರೆ 9,798 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆಯಬೇಕು ಎಂಬ ಕೋಟಾ ನಿಗದಿಯಾಗಿತ್ತು.

ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಅತಿ ಹೆಚ್ಚು 9,418 ಮತಗಳನ್ನು ಪಡೆದಿದ್ದಾರೆ. ಆದರೆ, ಕೋಟಾ ತಲುಪಲು ಇನ್ನೂ 380 ಮತಗಳ ಕೊರತೆ ಇದೆ.

ಜೆಡಿಎಸ್‌ ಅಚ್ಚರಿ: ಜೆಡಿಎಸ್‌ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಇಲ್ಲಿ 3,757 ಮತಗಳನ್ನು ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಇಲ್ಲಿ 953 ಮತಗಳನ್ನು ಮಾತ್ರ ಪಡೆದಿದ್ದರು. ಪುರ್ಲೆ ಅವರು ಕರ್ನಾಟಕ ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷರೂ ಆಗಿದ್ದರು. ಹೀಗಾಗಿ ಪದವಿ ಪೂರ್ವ ಉಪನ್ಯಾಸಕ ಮತದಾರರು ತಿಮ್ಮಯ್ಯ ಪುರ್ಲೆ ಅವರ ಬೆಂಬಲಕ್ಕೆ ನಿಂತಿದ್ದರಿಂದ ಅವರಿಗೆ ಇಷ್ಟೊಂದು ಮತ ಬಂದಿವೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT