ಶನಿವಾರ, ಅಕ್ಟೋಬರ್ 24, 2020
18 °C

ಈಶಾನ್ಯ ಶಿಕ್ಷಕರ ಕ್ಷೇತ್ರ: ಮಟ್ಟೂರ, ನಮೋಶಿ ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶರಣಪ್ಪ ಮಟ್ಟೂರ ಹಾಗೂ ಬಿಜೆಪಿ ಅಭ್ಯರ್ಥಿ ಶಶೀಲ್‌ ಜಿ.ನಮೋಶಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ಈ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿ, ಸಚಿವ ಕೆ.ಎಸ್‌. ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸುವಾಗ ನಮೋಶಿ ಜೊತೆಗಿದ್ದರು. ನಂತರ ಕಲಬುರ್ಗಿ, ಯಾದಗಿರಿ, ರಾಯಚೂರಲ್ಲಿ ಪ್ರಚಾರ ಸಭೆ ನಡೆಸಿದರು.

ಮಟ್ಟೂರ ನಾಮಪತ್ರ ಸಲ್ಲಿಸುವ ವೇಳೆ ಶಾಸಕರಾದ ಪ್ರಿಯಾಂಕ್‌ ಖರ್ಗೆ, ಡಾ.ಅಜಯ್‌ ಸಿಂಗ್‌ ಜೊತೆಗಿದ್ದರು. ನಂತರ ನಗರದಲ್ಲಿ ಕಾಂಗ್ರೆಸ್‌ ಪ್ರಚಾರ ಸಭೆಯನ್ನೂ ನಡೆಸಿದರು.

ಜೆಡಿಎಸ್‌ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಸಹ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅ.8ರಂದು ಕಲಬುರ್ಗಿಗೆ ಬರಲಿದ್ದು, ಅವರೊಟ್ಟಿಗೆ ಪುರ್ಲೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು