ಕಲಬುರಗಿ: ‘ಸಿಮೆಂಟ್ ವೇತನ ಮಂಡಳಿ ನಿಗದಿಪಡಿಸಿದ ವೇತನವನ್ನು ಸಿಮೆಂಟ್ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಗುತ್ತಿಗೆ ಕಾರ್ಮಿಕರಿಗೂ ಪಾವತಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಕಾರ್ಮಿಕ ಇಲಾಖೆ ಆದೇಶಿಸಿದೆ’ ಎಂದು ಅಲ್ಟ್ರಾಟೆಕ್ ಸಿಮೆಂಟ್ ಗುತ್ತಿಗೆ ಕಾರ್ಮಿಕರ ಸಂಘದ ಸಂಸ್ಥಾಪಕ ಅಧ್ಯಕ್ಷ ರಮಾಕಾಂತ ಕುಲಕರ್ಣಿ ಹೇಳಿದ್ದಾರೆ.
‘ವೇತನ ಮಂಡಳಿ ನಿಗದಿಪಡಿಸಿದ ಸಂಬಳವನ್ನು ಗುತ್ತಿಗೆ ಕಾರ್ಮಿಕರಿಗೂ ನೀಡಬೇಕು ಎಂದು ದಶಕಗಳಿಂದ ಹೋರಾಟ ಮಾಡಿಕೊಂಡು ಬರಲಾಗುತ್ತಿತ್ತು. ನಮ್ಮ ಹೋರಾಟಕ್ಕೆ ಕಾರ್ಮಿಕ ಇಲಾಖೆ ಸ್ಪಂದಿಸಿದೆ. ಸಿಮೆಂಟ್ ಕಾರ್ಖಾನೆಗಳಲ್ಲಿ ಕಾಯಂ ಕಾರ್ಮಿಕರ ಸಮನಾಗಿ ಗುತ್ತಿಗೆ ಕಾರ್ಮಿಕರಿಗೂ ವೇತನ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ರಾಜ್ಯಗಳ ಮುಖ್ಯಸ್ಥರಿಗೆ ಆದೇಶ ಪತ್ರದಲ್ಲಿ ನಿರ್ದೇಶಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.