ಶನಿವಾರ, ಮೇ 8, 2021
18 °C

ಎನ್‌ಎಸ್‌ಎಸ್‌ನಿಂದ ಕೊರೊನಾ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಕೋಶದಿಂದ ನಗರದಲ್ಲಿ ಶುಕ್ರವಾರ ಕೊರೊನಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಅಶೋಕ ನಗರ, ಶಹಾಬಜಾರ್, ಬ್ರಹ್ಮಪುರ ಮತ್ತು ಕೇಂದ್ರ ಬಸ್ ನಿಲ್ದಾಣದ ಎದುರು ನಡೆದ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಎನ್‌ಎಸ್‌ಎಸ್‌ ಕೋಶದ ಸಂಯೋಜ
ನಾಧಿಕಾರಿ ಪ್ರೊ. ರಮೇಶ ಲಂಡನಕರ್, ‘ಕೋವಿಡ್‌ ರೋಗಾಣುವಿನಿಂದ ಜನರು ರಕ್ಷಣೆ ಮಾಡಿಕೊಳ್ಳಬೇಕು. ವಿಶ್ವದಾದ್ಯಂತ ಲಕ್ಷಾಂತರ ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಜನರಿಗೆ ಆರೋಗ್ಯ ಸೌಲಭ್ಯಗಳು ಸಮರ್ಪಕವಾಗಿ ಒದಗುತ್ತಿಲ್ಲ. ಕೊರೊನಾ ಮಹಾಮಾರಿ ಹಿಮ್ಮೆಟ್ಟಿಸಬೇಕೆಂದರೆ ಜನರು ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕು. ಮನೆಯಿಂದ ಆಚೆ ಬರಬಾರದು. ಸರ್ಕಾರ ನಿಗದಿಪಡಿಸಿದ ಸಮಯದಲ್ಲಿ ಮನೆಯಿಂದ ಹೊರಬರಬೇಕಾದ ಸಂದರ್ಭದಲ್ಲಿ ಮುಖ
ಗವಸು ಹಾಕಿಕೊಳ್ಳಬೇಕು. ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು’ ಎಂದರು.

‘ಮನೆಯಲ್ಲೇ ಇದ್ದು ಕುಟುಂಬವನ್ನು ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಸ್ವಚ್ಛತೆಯನ್ನು ಕಾಪಾಡಬೇಕು. ಸಾಬೂನು, ಸ್ಯಾನಿಟೈಜರ್‌ ಬಳಕೆ ಮಾಡಬೇಕು. ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರೂ ಹಾಕಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಅಭಿಯಾನದಲ್ಲಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಮುಖ್ಯಸ್ಥ ಪ್ರೊ. ಕೆ. ಸಿದ್ದಪ್ಪ, ಮಹಾನಗರ ಪಾಲಿಕೆ ಅಧಿಕಾರಿ ನಾಗರತ್ನಾ ದೇಶಮಾನೆ, ಎನ್‌ಎಸ್‌ಎಸ್‌ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.