ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಪೌಷ್ಟಿಕತೆ ನಿವಾರಣೆಗೆ ಪೋಷಣಾ ಅಭಿಯಾನ

ಪೋಷಣಾ ಮಾಸಾಚರಣೆ, ಗರ್ಭಿಣಿ ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನ ಪ್ರಾಶನ
Published : 21 ಸೆಪ್ಟೆಂಬರ್ 2024, 15:54 IST
Last Updated : 21 ಸೆಪ್ಟೆಂಬರ್ 2024, 15:54 IST
ಫಾಲೋ ಮಾಡಿ
Comments

ವಾಡಿ: ಮಹಿಳೆಯರು ತಮ್ಮ ಜತೆಗೆ ಮಕ್ಕಳನ್ನು ಆರೋಗ್ಯವಂತರನ್ನಾಗಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಹಾಬಾದ ಸಿಡಿಪಿಒ ವಿಜಯಲಕ್ಷ್ಮಿ ಹೆರೂರು ಹೇಳಿದರು.

ವಾಡಿ ಸಮೀಪದ ಯಾಗಾಪುರ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಪೋಷಣಾ ಮಾಸಾಚರಣೆ, ಗರ್ಭಿಣಿ, ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನ ಪ್ರಾಶನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣಾ ಅಭಿಯಾನ ಒಂದು ಮಹತ್ತರ ಕಾರ್ಯಕ್ರಮವಾಗಿದ್ದು ಬಾಲಕಿಯರು, ಗರ್ಭಿಣಿಯರು ಸೇರಿದಂತೆ ಮಹಿಳೆಯರು ಮತ್ತು ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸುವ ಕಾರ್ಯಕ್ರಮವಾಗಿದ್ದು, ಮಹಿಳೆಯರು ಪೋಷಣಾ ಅಭಿಯಾನದಡಿ ದೊರೆಯುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತಿಬಾಯಿ ಡೊಂಗ್ರು ರಾಠೋಡ, ಕಾರ್ಯದರ್ಶಿ ಮಲ್ಲಿಕಾರ್ಜುನ, ಬಾಲ ವಿಕಾಸ ಸಲಹಾ ಸಮಿತಿಯ ಸದಸ್ಯರಾದ ಧನರಾಜ್ ಸಾಹುಕಾರ, ದೇವೇಂದ್ರಪ್ಪ ಮಾಟ್ನಳ್ಳಿ, ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ ಗುಂಡುಗುರ್ತಿ ಹಾಗೂ ವಲಯ ಮೇಲ್ವಿಚಾರಕಿ ಲಕ್ಷ್ಮಿ ಮಸ್ಕನ್, ಅಂಗನವಾಡಿ ಕಾರ್ಯಕರ್ತೆಯರಾದ ಫರೀದಾ ಮಸ್ತಾನ್, ನಾಗಮ್ಮ ಗಿರಬಾ, ಸುರೇಖಾ ನಾಯ್ಕೋಡಿ, ಮರೆಮ್ಮ, ಲಕ್ಷ್ಮೀ ಚವ್ಹಾಣ, ಸುಶೀಲಾ ಚವ್ಹಾಣ, ಪದ್ಮಾವತಿ ಸಹಿತ ಅಂಗನವಾಡಿ ಸಹಾಯಕಿಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT