ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಲಬುರ್ಗಿಗೆ ನಾನೇ ರಾಜಾಹುಲಿ’

Last Updated 25 ಜನವರಿ 2020, 11:38 IST
ಅಕ್ಷರ ಗಾತ್ರ

ಚಿತ್ತಾಪುರ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರಾಜ್ಯದಲ್ಲಿ ರಾಜಾಹುಲಿಯಾದರೆ, ಕಲಬುರ್ಗಿಗೆ ನಾನೇ ರಾಜಾಹುಲಿ’ ಎಂದು ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ ಹೇಳಿದರು.

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಶಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಪೌರತ್ವ ಕಾಯ್ದೆ-2019 ಜನಜಾಗೃತಿ ಸಭೆ ಹಾಗೂ ಬಿಜೆಪಿ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪೌರತ್ವ ಕಾಯ್ದೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಇದರ ಬಗ್ಗೆ ಯಾರೂ ಸಹ ಆತಂಕ ಪಡಬೇಕಿಲ್ಲ. ಭಾರತ ದೇಶದಲ್ಲಿ ಎಲ್ಲರೂ ನೆಮ್ಮದಿಯಿಂದ ಬಾಳಬೇಕು ಎಂಬ ಉದ್ದೇಶದಿಂದಲೇ ಈ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಮಾಜಿ ಶಾಸಕರಾದ ವಾಲ್ಮೀಕ ನಾಯಕ, ವಿಶ್ವನಾಥ ಪಾಟೀಲ್ ಹೆಬ್ಬಾಳ, ಚಿತ್ತಾಪುರ ಮಂಡಲ ಉಸ್ತುವಾರಿ ರವಿ ಬಿರಾದಾರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ತೆಂಗಳಿ, ಬಿಜೆಪಿ ನೂತನ ಅಧ್ಯಕ್ಷ ನೀಲಕಂಠ ಪಾಟೀಲ್, ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್ ಇದ್ದರು.

ಶಾಸಕರಾದ ಸುಭಾಷ್ ಗುತ್ತೇದಾರ್, ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾ ಅಧ್ಯಕ್ಷೆ ದಿವ್ಯಾ ಹಾಗರಗಿ, ಮುಖಂಡರಾದ ಲಿಂಗಾರೆಡ್ಡಿ ಬಾಸರೆಡ್ಡಿ, ಸೋಮಶೇಖರ ಪಾಟೀಲ್ ಬೆಳಗುಂಪಾ, ಶಿವಲಿಂಗಪ್ಪ ವಾಡೇದ್, ಚಂದ್ರಶೇಖರ ಅವಂಟಿ, ನಾಮದೇವ ರಾಠೋಡ್, ಬಸವರಾಜ ಶಿವಗೋಳ, ಅಶೋಕ ಸಗರ, ರವೀಂದ್ರ ಸಜ್ಜನಶೆಟ್ಟಿ, ಅರವಿಂದ ಚವಾಣ್, ದಶರಥ ನಾಮದಾರ, ಬಸವರಾಜ ಬೆಣ್ಣೂರಕರ್, ಭೀಮರೆಡ್ಡಿ ಕುರಾಳ, ಭಾಗರಥಿ, ನಾಗುಬಾಯಿ ಜಿತುರೆ, ನಿವೇದಿತಾ, ಕವಿತಾ ಚವಾಣ್, ಶ್ರೀಶೈಲ್ ನಾಟಿಕಾರ ಇದ್ದರು.

ಬಿಜೆಪಿ ನೂತನ ಅಧ್ಯಕ್ಷ ನೀಲಕಂಠ ಪಾಟೀಲ್ ಅವರಿಗೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪುಜಾರಿ ಅವರಿಗೆ ಮಾಜಿ ಅಧ್ಯಕ್ಷ ಬಸವರಾಜ ಸಂಕನೂರ ಅವರು ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಶರಣು ಜ್ಯೊತಿ ನಿರೂಪಿಸಿ ವಂದಿಸಿದರು. ನಾಗರಾಜ ಹೂಗಾರ, ಮಲ್ಲಿಕಾರ್ಜುನ ಮಾಲಗತ್ತಿ, ಮಹೇಶ ಬಟಗಿರಿ, ನಾಗರಾಜ ಭಂಕಲಗಾ, ಸುರೇಶ ಬೆನಕನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT