ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ಯೋಜನೆ ಮನೆ ಬಾಗಿಲಿಗೆ ತಲುಪಿಸಿ’

ಸೊನ್ನ ಗ್ರಾಮದಲ್ಲಿ ‘ಅಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ
Last Updated 16 ಅಕ್ಟೋಬರ್ 2021, 15:25 IST
ಅಕ್ಷರ ಗಾತ್ರ

ಜೇವರ್ಗಿ: ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿ ಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬ ವಿಶೇಷ ಕಾರ್ಯಕ್ರಮ ಜಾರಿಗೆ ತಂದಿದೆ. ಗ್ರಾಮದಲ್ಲಿ ವಾಸ್ತವ್ಯ ನಡೆಸುವ ಮೂಲಕ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶ ಹೊಂದಲಾಗಿದೆ ಎಂದು ತಹಶೀಲ್ದಾರ್ ವಿನಯಕುಮಾರ ಪಾಟೀಲ ಹೇಳಿದರು.

ತಾಲ್ಲೂಕಿನ ಸೊನ್ನ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೇವರ್ಗಿ ತಾಲ್ಲೂಕು ಆಡಳಿತ ವತಿಯಿಂದ ಶನಿವಾರ ಆಯೋಜಿಸಿದ್ದ ‘ಅಧಿಕಾರಿಗಳ ನಡೆ– ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳು, ಕುಂದು-ಕೊರತೆಗಳನ್ನು ಆಲಿಸುವ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಗ್ರಾಮಸ್ಥರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಲಿಖಿತವಾಗಿ ಮನವಿ ಪತ್ರಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕು. ಕಾಲಮಿತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡುವ ಪರಿಹಾರ ಕಲ್ಪಿಸಾಗುವುದು ಎಂದು ತಹಶೀಲ್ದಾರ್ ವಿನಯಕುಮಾರ ಪಾಟೀಲ ಹೇಳಿದರು.

ಇದಕ್ಕೂ ಮುಂಚೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊನ್ನ ವಿರಕ್ತಮಠದ ಪೀಠಾಧಿಪತಿ ಡಾ.ಶಿವಾನಂದ ಸ್ವಾಮೀಜಿ, ರಾಜ್ಯ ಸರ್ಕಾರ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ಸೊನ್ನ ಗ್ರಾಮಸ್ಥರು ತಮ್ಮ ಮನೆ ಬಾಗಿಲಿಗೆ ಬಂದಿರುವ ಅಧಿಕಾರಿಗಳ ಮೂಲಕ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅಧಿಕಾರಿಗಳು ಒಂದು ರಾತ್ರಿ ಸೊನ್ನ ಗ್ರಾಮದಲ್ಲಿಯೇ ವಾಸ್ತವ್ಯ ಮಾಡುತ್ತಾರೆ. ಇದರಿಂದ ಹೆಚ್ಚಿನ ಕೆಲದಸ ಕಾರ್ಯಗಳು ಸರಾಗವಾಗಿ ಮಾಡಿ ಮುಗಿಸಲು ಅನುಕೂಲವಾಗುತ್ತದೆ ಎಂದರು.

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು. ಸಾರ್ವಜನಿಕ ಶೌಚಾಲಯ, ಒಳಚರಂಡಿ, ಸಿಸಿ ರಸ್ತೆ, ಅಂಗನವಾಡಿ ಕೇಂದ್ರಗಳ ದುರಸ್ತಿ ಹಾಗೂ ಖಬರಸ್ಥಾನಕ್ಕೆ ಸರ್ಕಾರಿ ಗೈರಾಣು ಜಮೀನು ಮಂಜೋರಾತಿ ಸೇರಿದಂತೆ ಅನೇಕ ಬೇಡಿಕೆಗಳ ಮನವಿ ಪತ್ರವನ್ನು ಗ್ರಾಮಸ್ಥರು ಅಧಿಕಾರಿಗಳಿಗೆ ಸಲ್ಲಿಸಿದರು.

ಸಮಾಜ ಕಲ್ಯಾಣ ಇಲಖೆ ಅಧಿಕಾರಿ ಅಶೋಕ ನಾಯಕ, ಶಿಕ್ಷಣ ಇಲಾಖೆಯ ರಾಜಶೇಖರ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಂಗಣ್ಣಗೌಡ ಪಾಟೀಲ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ.ಪಾಟೀಲ, ತೋಟಗಾರಿಕೆ ಇಲಾಖೆ ಅಧಿಕಾರಿ ಸುಷ್ಮಾ ಪಾಟೀಲ, ಸೊನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಪ್ಪ ಗುಬ್ಬಾಯಡ, ಉಪಾಧ್ಯಕ್ಷೆ ಸವಿತಾ ಸಿದ್ದಣ್ಣ ಕಲ್ಲೂರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿದ್ದು ಪಾಟೀಲ, ಪಂಚಾಯಿತಿರಾಜ್ ಇಲಾಖೆಯ ಸಹಾಯಕ ಎಂಜಿನಿಯರ್ ಚಂದೂಲಾಲ್ ರಾಠೋಡ, ಅಬಕಾರಿ ಇಲಾಖೆ ಇನ್‌ಸ್ಪೆಕ್ಟರ್ ವನೀತಾ ಸಿತಾಳೆ, ಜೇವರ್ಗಿ ಪಿಎಸ್‌ಐ ಸಂಗಮೇಶ ಅಂಗಡಿ, ಸೊನ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವಿರೇಶ ಮಾಕಾ, ಮಂದೇವಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರೇಣುಕಾದೇವಿ, ಪಿಡಿಒ ಬಿ.ಆರ್.ಪಾಟೀಲ, ಗ್ರಾಮಸ್ಥರಾದ ರಾಮಚಂದ್ರ ಧರೇನ್, ವಿಜಯಕುಮಾರ ಬಿರಾದಾರ, ಸಿದ್ದು ಆಂದೋಲಾ ಸೇರಿದಂತೆ ಸೊನ್ನ ಗ್ರಾಮಸ್ಥರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇದ್ದರು.

ಸೊನ್ನ ಗ್ರಾ.ಪಂ. ಕಾರ್ಯದರ್ಶಿ ಉಮ್ಮನಗೌಡ ಹಿರೇಗೌಡ ಸ್ವಾಗತಿಸಿದರು. ಮಲ್ಲಿಕಾರ್ಜುನ ಬಿರಾದಾರ ನಿರೂಪಿಸಿದರು. ವೈ.ಜಿ.ಮಾಲಿಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT