ಬುಧವಾರ, ಮೇ 18, 2022
21 °C

‘ಸರ್ಕಾರದ ಯೋಜನೆಗಳ ಜಾಗೃತಿ ಅಗತ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಳಂದ: ಸರ್ಕಾರದ ಹಲವು ಯೋಜನೆಗಳ ಸದುಪಯೋಗಕ್ಕಾಗಿ ಗ್ರಾಮೀಣ ಭಾಗದ ಜನರು ಮುಖ್ಯವಾಗಿ ಯೋಜನೆಗಳ ಕುರಿತು ಜಾಗೃತಿ ಹೊಂದವದು ಅಗತ್ಯವಾಗಿದೆ ಎಂದು ಶಾಸಕ ಸುಭಾಷ ಗುತ್ತೇದಾರ ತಿಳಿಸಿದರು.

ತಾಲ್ಲೂಕಿನ ಗಡಿಗ್ರಾಮ ಶಿರೂರು(ಜಿ) ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಏರ್ಪಡಿಸಿದ ಗ್ರಾಮವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಧ್ಯಾಸುರಕ್ಷಾ, ಅಂಗವಿಕಲರ ವೇತನ ಹಾಗೂ ವಿಧವಾ ವೇತನ ಸೌಲಭ್ಯಗಳು ಈ ಗ್ರಾಮ ವಾಸ್ತವ್ಯ ಹಾಗೂ ಜನಸಂಪರ್ಕ ಸಭೆಗಳ ಮೂಲಕ ಸ್ಥಳದಲ್ಲಿ ಸೌಲಭ್ಯಗಳು ಅರ್ಹರಿಗೆ ದೊರೆಯಲಿವೆ ಎಂದರು.

ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮಾತನಾಡಿ, ಭಾಗ್ಯಲಕ್ಷ್ಮಿ ಯೋಜನೆ, ಮನಸ್ವಿನಿ, ಮೈತ್ರಿ ಸೇರಿದಂತೆ ಅಂತ್ಯಸಂಸ್ಕಾರ ಸಹಾಯಧನ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳೂ ಪಡೆದುಕೊಳ್ಳಬೇಕು. ಸರ್ಕಾರದ ಸೌಲಭ್ಯಗಳ ಯಶಸ್ವಿಗಾಗಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಉಪ ತಹಶೀಲ್ದಾರ್ ಬಸವರಾಜ ರಕ್ಕಸಗಿ, ಶರಣಬಸಪ್ಪ ಹಕ್ಕಿ, ಅಲ್ಲಾವುದ್ದಿನ್, ದತ್ತಾ, ಮುಖಂಡರಾದ ಮಲ್ಲಿಕಾರ್ಜುನ ಕಂದಗೋಳೆ  ಇದ್ದರು. ವಿವಿಧ ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯ ಸ್ಥಳದಲ್ಲಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮಂಜೂರು ಮಾಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.