ಗುರುವಾರ , ಆಗಸ್ಟ್ 18, 2022
25 °C

ವಾಹನ ಡಿಕ್ಕಿ: ವೃದ್ಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಮಲಾಪುರ: ಪಟ್ಟಣದ ಓಕಳಿ ಕ್ರಾಸ್ ಬಳಿ ವಾಹನ ಡಿಕ್ಕಿ ಹೊಡೆದು ಪಟ್ಟಣದ ನಿವಾಸಿ ರಾಮಣ್ಣ ಶಿವಪ್ಪ ಹರಕಂಚಿ (65) ಎಂಬುವವರು ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸೋಮವಾರ ಸಂಜೆ 6ಕ್ಕೆ ರಾಮಣ್ಣ ಮನೆಯಿಂದ ತೆರಳಿದ್ದರು. ರಾತ್ರಿ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹ ಹೆದ್ದಾರಿ ಆಚೆ ಬಿದ್ದಿದೆ.

‘ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ ಸಾರ್ವಜನಿಕರು ಗಮನಿಸಿ ನಮಗೆ ಕರೆ ಮಾಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು