ಸೋಮವಾರ, ಜೂನ್ 1, 2020
27 °C

ಕಲಬುರ್ಗಿಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರದ ಸಂತ್ರಾಸವಾಡಿಯ ಜಿಡಿಎ ಬಡಾವಣೆಯ ನಿವಾಸಿಯಾಗಿದ್ದ 67 ವರ್ಷದ ವೃದ್ಧರೊಬ್ಬರು ತೀವ್ರ ಉಸಿರಾಟದ ತೊಂದರೆಯಿಂದ ಇಲ್ಲಿನ ಇಎಸ್ಐಸಿ ಆಸ್ಪತ್ರೆಯಲ್ಲಿ ಮಂಗಳವಾರ ತಡ ರಾತ್ರಿ ‌ನಿಧನರಾದರು.

ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಈ ಮೊದಲು ಅವರನ್ನು ನಗರದ ರಿಂಗ್ ರೋಡ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‌ಕೊರೊನಾ ಸೋಂಕಿನ ಲಕ್ಷಣಗಳು ‌ಕಂಡು ಬಂದಿದ್ದರಿಂದ ಮಂಗಳವಾರ ಇಎಸ್‌ಐಸಿ ಆಸ್ಪತ್ರೆಗೆ ದಾಖಲಿಸಲಾಯಿತು. ರಾತ್ರಿ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಕೊರೊನಾ ವೈರಸ್ ಸೋಂಕಿನಿಂದಲೇ ವೃದ್ಧ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ‌ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.

ಮೆಕ್ಕಾದಿಂದ ಕಲಬುರ್ಗಿಗೆ ‌ವಾಪಸಾಗಿದ್ದ 76 ವರ್ಷದ ವೃದ್ಧರೊಬ್ಬರು ಹೈದರಾಬಾದ್ ನಲ್ಲಿ ಚಿಕಿತ್ಸೆ ಫಲಿಸದೇ ಮಾ 10ರಂದು ನಿಧನರಾಗಿದ್ದರು‌. ನಂತರ ಪ್ರಯೋಗಾಲಯದ ಫಲಿತಾಂಶದಲ್ಲಿ ಅವರಿಗೆ ಕೋವಿಡ್ 19 ಸೋಂಕಿರುವುದು ದೃಢಪಟ್ಟಿತ್ತು

ಈಗ ಮತ್ತೊಬ್ಬ ವ್ಯಕ್ತಿ ನಿಧನರಾಗುವುದರೊಂದಿಗೆ ಕಲಬುರ್ಗಿಯಲ್ಲಿ ಕೋವಿಡ್ -19ಗೆ ಬಲಿಯಾದವರ ಸಂಖ್ಯೆ ‌ಎರಡಕ್ಕೇರಿದಂತಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು