ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಶಾಲಾ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Last Updated 30 ಡಿಸೆಂಬರ್ 2021, 4:28 IST
ಅಕ್ಷರ ಗಾತ್ರ

ಕಲಬುರಗಿ: ಸೇಡಂ ತಾಲ್ಲೂಕಿನ ಬೊಂದೆಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ತಾಂಡಾ ಶಾಲೆಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ‌‘ಚಿಲ್ಡ್ರನ್ಸ್ ಲಿಟರರಿ ಕ್ಲಬ್’ ವತಿಯಿಂದ 40 ದಿನಗಳ ಆನ್‌ಲೈನ್ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕಿ, ಕ್ಲಬ್ ನಿರ್ದೇಶಕಿ ಡಾ.ಆರ್.ಪೂರ್ಣಿಮಾ ಅವರು ಕಾರ್ಯಾಗಾರದ ನೇತೃತ್ವ ವಹಿಸಿದ್ದರು.

ಕಲಿಯುವವರು ಮತ್ತು ಶಿಕ್ಷಕರ ನಡುವಿನ ಅಂತರವು ಸುಮಾರು 700 ಕಿಲೋಮೀಟರ್‌ಗಳಾಗಿದ್ದರೂ, ಸಮಾಜದ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳಿಗೆ ವಿಭಿನ್ನ ಕಲಿಕಾ ಕ್ರಮವನ್ನು ಕಲಿಸುವುದಾಗಿತ್ತು ಎಂದು ಪೂರ್ಣಿಮಾ ತಿಳಿಸಿದ್ದಾರೆ.

1990ರಲ್ಲಿ ಆರ್. ಪೂರ್ಣಿಮಾ ಅವರೇ ಕ್ಲಬ್‌ ಹುಟ್ಟುಹಾಕಿ ಇಂದಿನವರೆಗೂ ತಾವೊಬ್ಬರೇ ನಡೆಸಿಕೊಂಡು ಬರುತ್ತಿದ್ದಾರೆ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಇಂಗ್ಲಿಷ್ ಕಲಿಕೆಯಲ್ಲಿ ದೊಡ್ಡ ಕಂದಕಗಳಿರುವುದರಿಂದ, ಸಮಾಜದ ಶ್ಯೆಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಲ್ಲಿ, ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ಭಾಷಾ ಕೌಶಲದ ಮೂಲಭೂತ ಅಂಶಗಳನ್ನು ಅಳವಡಿಸುವುದು ಮತ್ತು ಬಲಪಡಿಸುವುದು ಕಾರ‍್ಯಾಗಾರದ ಪ್ರಾಥಮಿಕಉದ್ದೇಶವಾಗಿದೆ.

ಶಾಲಾ ಮುಖ್ಯೋಪಾಧ್ಯಾಯ ರಾಮಾಂಜನೇಯ ಕಾರ್ಯಾಗಾರದ ಸಂದರ್ಭದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT