ಇಂದೋರ್: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಜಯಿಸಿರುವ ಭಾರತ ತಂಡ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1–0ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜಸ್‌ಪ್ರೀತ್ ಬೂಮ್ರಾ ಬದಲಿಗೆ ಪ್ರಸಿದ್ಧ ಕೃಷ್ಣ ಅವರಿಗೆ ಅವಕಾಶ ನೀಡಲಾಗಿದೆ. ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್‌ಗೆ ವಿಶ್ರಾಂತಿ ನೀಡಲಾಗಿದ್ದು, ಸ್ಟೀವ್ ಸ್ಮಿತ್ ತಂಡ ಮುನ್ನಡೆಸಲಿದ್ದಾರೆ.
ಭಾರತ: ಕೆ.ಎಲ್. ರಾಹುಲ್ (ನಾಯಕ–ವಿಕೆಟ್‌ಕೀಪರ್), ಶುಭಮನ್ ಗಿಲ್, ಋತುರಾಜ್ ಗಾಯಕವಾಡ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಶಮಿ,
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಷೇನ್, ಕ್ಯಾಮೆರಾನ್ ಗ್ರೀನ್, ಮ್ಯಾಟ್ ಶಾರ್ಟ್, ಅಲೆಕ್ಸ್ ಕೆರ್ರಿ, ಸೀನ್ ಅಬಾಟ್, ಆ್ಯಡಂ ಜಂಪಾ, ಜೋಶ್ ಇಂಗ್ಲಿಷ್ (ವಿಕೆಟ್‌ಕೀಪರ್), ಸ್ಪೆನ್ಸರ್ ಜಾನ್ಸನ್, ಜೋಶ್ ಹೇಜಲ್‌ವುಡ್