ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ತಗ್ಗದ ಭೀಮೆಯ ಅಬ್ಬರ

Last Updated 18 ಅಕ್ಟೋಬರ್ 2020, 8:17 IST
ಅಕ್ಷರ ಗಾತ್ರ

ಕಲಬುರ್ಗಿ: ಭೀಮಾ ನದಿಯ ಹರಿವಿನ ಮಟ್ಟ 8.20ಲಕ್ಷ ಕ್ಯುಸೆಕ್ ಗೆ ತಲುಪಿದೆ. ಅಫಜಲಪುರ ನಗರದ ಕೆಲ ಬಡಾವಣೆಗಳಿಗೂ ನೀರು ನುಗ್ಗಿದೆ.

ಸೇನೆಯ ಒಂದು ತುಕಡಿಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಪ್ರವಾಹಕ್ಕೆ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ನದಿ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.

ಇನ್ನೊಂದೆಡೆ ಜನರೇ ಟ್ರ್ಯಾಕ್ಟರ್ ಗಳಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.

ಅಫಜಲಪುರ ತಾಲ್ಲೂಕಿನ ಶಿರವಾಳ-ಭಂಕಲಗಾ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಟ್ರ್ಯಾಕ್ಟರ್‌ ಸಹಾಯದಿಂದ ಜನ ಸಂಚರಿಸುತ್ತಿದ್ದಾರೆ.

ಇದೇ ಗ್ರಾಮದಲ್ಲಿ ಪ್ರವಾಹದಲ್ಲಿ ಬಸ್ ಸಿಕ್ಕಿಹಾಕಿಕೊಂಡಿತ್ತು. ಅದರಲ್ಲಿ ಇದ್ದ ಪ್ರಯಾಣಿಕರನ್ನು ಟ್ರ್ಯಾಕ್ಟರ್‌ನಲ್ಲಿ ಕರೆತರಲಾಯಿತು.

ಫೋಟೊ ಗ್ಯಾಲರಿ ನೋಡಲು ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT