ಕಲಬುರ್ಗಿ: ಸೆಪ್ಟೆಂಬರ್ 3ರಂದು ನಡೆಯಲಿರುವ ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆ ಪ್ರಯುಕ್ತ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬುಧವಾರ ನಗರದ ವಿಜಯಾ ವಿದ್ಯಾಲಯ ಮೈದಾನದಲ್ಲಿ ಆಯೋಜಿಸಿದ ಪ್ಯಾರಾ ಪ್ಯಾರಾ ಗ್ಲೈಡಿಂಗ್ ಹಾರಾಟಕ್ಕೆ ಸ್ವೀಪ್ ಸಮಿತಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ‘ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬ. ಮತದಾನ ಮಾಡುವ ಮೂಲಕ ಪ್ರತಿಯೊಬ್ಬ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿ ಮೂಲಕ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಬೇಕು ಮತ್ತು ಚುನಾವಣೆಯನ್ನು ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.
ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಮಾತನಾಡಿ, ನಗರದ ಅಭಿವೃದ್ಧಿಗಾಗಿ ಗರಿಷ್ಠ ಮಟ್ಟದಲ್ಲಿ ಜನತೆ ಮತದಾನ ಮಾಡಬೇಕು ಎಂದರು.
ಪಾಲಿಕೆಯ ಪರಿಸರ ಎಂಜಿನಿಯರ್ ಮುನಾಫ್ ಪಟೇಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ಡಿ.ಕೆ.ರಾಜರತ್ನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹೇಶ ಪಾಟೀಲ, ಪ್ಯಾರಾ ಮೋಟರ್ ಪೈಲಟ್ ಸಿದ್ಧಾರ್ಥ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.