ಕಲಬುರ್ಗಿ: ‘ಪರೀಕ್ಷೆಗಳು ಆತ್ಮ ವಿಶ್ವಾಸವನ್ನು ವೃದ್ಧಿಸಬೇಕು. ಅದಕ್ಕಾಗಿ ವಿದ್ಯಾರ್ಥಿಗಳು ಕೊನೆಯ ಕ್ಷಣದವರೆಗೂ ಓದಿನಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿಭಾಗದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ‘ಪರೀಕ್ಷೆ ಪೆ ಚರ್ಚಾ’ ಕಾರ್ಯಕ್ರಮವನ್ನು ವೀಕ್ಷಿಸಿದ ನಂತರ ಅವರು ಮಾತನಾಡಿದರು.

‘ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮಾನಸಿಕ, ನೈತಿಕ ಸ್ಥೈರ್ಯವನ್ನು ತುಂಬಿ ಅವರನ್ನು ತಾಯಿಯಂತೆ ಕಾಣಬೇಕು. ದಯೆ, ಮಮತೆ, ಕರುಣೆ ಹೊಂದಿರಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬೋಧನೆ ಮಾಡಬೇಕು. ಪ್ರಧಾನಿ ಮಾತುಗಳು ಪ್ರೇರಣೆಯಿಂದ ಕೂಡಿದ್ದು, ಅವು ಅವರ ಅನುಭವದ ಮಾತುಗಳಾಗಿವೆ’ ಎಂದರು.

ಕುಲಸಚಿವ ಡಾ. ಅನಿಲಕುಮಾರ ಬಿಡವೆ ಮಾತನಾಡಿ, ‘ಶಿಕ್ಷಕರು ವಿದ್ಯಾರ್ಥಿಗಳ ಮಧ್ಯೆ ಮಧುರ ಬಾಂಧವ್ಯ ಇರಬೇಕು. ವಿದ್ಯಾರ್ಥಿಗಳ ಮನಸ್ಸು ಅರಿಯುವ ಕೆಲಸವನ್ನು ಶಿಕ್ಷಕರು ಮಾಡಬೇಕು. ವಿದ್ಯಾರ್ಥಿಗಳ ಅನುತ್ತೀರ್ಣಕ್ಕೆ ಕಾರಣಗಳನ್ನು ಕಂಡು ಹಿಡಿದು ಅವರನ್ನು ಉತ್ತೀರ್ಣರನ್ನಾಗಿ ಮಾಡಬೇಕು ಎನ್ನುವುದು ಶರಣಬಸವಪ್ಪ ಅಪ್ಪ ಅವರ ಆಶಯವಾಗಿದೆ’ ಎಂದು ತಿಳಿಸಿದರು.

ಸಮ ಕುಲಪತಿ ಡಾ.ವಿ.ಡಿ.ಮೈತ್ರಿ ಮಾತನಾಡಿ, ‘ಪಾಲಕರು ಮಾಡಲಾಗದ ಕೆಲಸಗಳನ್ನು ಶಿಕ್ಷಕರು ಅವರ ಸ್ಥಾನದಲ್ಲಿ ನಿಂತು ಮಾಡಬೇಕು. ಜೀವನದಲ್ಲಿ ಚಿಕ್ಕ ಚಿಕ್ಕ ಗುರಿಗಳನ್ನು ಸಾಧಿಸುತ್ತ ದೊಡ್ಡ ಗುರಿಯೆಡೆಗೆ ನಮ್ಮ ಗಮನ ಇರಿಸಬೇಕು’ ಎಂದು ಹೇಳಿದರು.

ಡೀನ್ ಡಾ.ಲಿಂಗರಾಜ ಶಾಸ್ತ್ರಿ, ಡಾ.ಲಕ್ಷ್ಮೀ ಮಾಕಾ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.