ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ಪೇ ಚರ್ಚೆ: ಮೂವರು ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಮೆಚ್ಚುಗೆ ಪತ್ರ

Published 18 ಅಕ್ಟೋಬರ್ 2023, 15:50 IST
Last Updated 18 ಅಕ್ಟೋಬರ್ 2023, 15:50 IST
ಅಕ್ಷರ ಗಾತ್ರ

ಕಲಬುರಗಿ: ಪರೀಕ್ಷಾ ಪೇ ಚರ್ಚೆಯಲ್ಲಿ ಪಾಲ್ಗೊಂಡಿದ್ದ ನಗರದ ಶ್ರೀಗುರು ಪಿಯು ವಿಜ್ಞಾನ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ ‍ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ಪತ್ರ ಬರೆದಿದ್ದಾರೆ.

ಕಾಲೇಜಿನ ಶ್ರಿನಿಧಿ ಅರವಿಂದಕುಮಾರ್, ದಿವ್ಯಾ ಲಕ್ಷ್ಮಣ, ಕಾರ್ತಿಕ್‌ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದಿದ್ದ ಚರ್ಚೆಯಲ್ಲಿ ಪಾಲ್ಗೊಂಡು ಅಭಿಪ್ರಾಯ ಹಂಚಿಕೊಂಡಿದ್ದರು.

 ‘ನಿಮ್ಮಂತಹ ಯುವ ಜನರ ಅಭಿಪ್ರಾಯ ತಿಳಿದುಕೊಳ್ಳುವುದು ನನಗೆ ವಿಶೇಷ ಸಂತಸ ತಂದಿದೆ’ ಎಂದು ಪ್ರಧಾನಿ ಮೋದಿ ಅವರು ಪತ್ರದಲ್ಲಿ ಉಲ್ಲೇಖಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ಮೆಚ್ಚುಗೆ ಪತ್ರ ಬರೆದಿರುವುದಕ್ಕೆ ಸಂಸ್ಥೆಯ ಅಧ್ಯಕ್ಷೆ ನಳಿನಿ ಎ.ನಾಯ್ಕ್‌, ಕಾರ್ಯದರ್ಶಿ ನಿತಿನ್‌ ನಾಯ್ಕ್‌, ಆಡಳಿತಾಧಿಕಾರಿ ನೇಹಾ ಎನ್‌.ನಾಯ್ಕ್‌, ಸದಸ್ಯರಾದ ಗುರುರಾಜ ನಾಯ್ಕ್‌, ಪ್ರಾಂಶುಪಾಲ ವಿದ್ಯಾಸಾಗರ ಗೋಗಿ ಸೇರಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT