ಗುರುವಾರ , ಡಿಸೆಂಬರ್ 2, 2021
19 °C

ಪರಿನಿರ್ವಾಣ: 27ರಿಂದ ವಿವಿಧ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ವಾಡಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ತರುಣ ಸಂಘ ಹಾಗೂ ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆ (ಐಬಿವೈಒ) ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ (ಪರಿನಿಬ್ಬಾಣ) ದಿನದ ನಿಮಿತ್ತ ನ.27ರಿಂದ ಡಿ.6ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಭಂತೆ ಬುದ್ಧರತ್ನ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.27ರಂದು ಚಿತ್ತಾಪುರ ತಾಲ್ಲೂಕು ಮಟ್ಟದಲ್ಲಿ 9ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹10 ಸಾವಿರ, ದ್ವಿತೀಯ ₹5 ಸಾವಿರ ಹಾಗೂ ತೃತೀಯ ಬಹುಮಾನ ₹2,500 ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹5 ಸಾವಿರ, ದ್ವಿತೀಯ ₹3 ಸಾವಿರ ಹಾಗೂ ತೃತೀಯ ಬಹುಮಾನ ₹1,500 ನಗದು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ನ.28ರಂದು ವಾಡಿಯ ಅಂಬೇಡ್ಕರ್ ಕಾಲೊನಿಯಲ್ಲಿರುವ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಆರೋಗ್ಯ
ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿದೆ. ಡಿ.6ರಂದು ಡಾ.ಬಿ. ಆರ್.ಅಂಬೇಡ್ಕರ್ ವೃತ್ತದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಮಾಹಿತಿಗೆ ಮೊ: 9008236882 ಹಾಗೂ 7090638562 ಸಂಪರ್ಕಿಸಬಹುದು ಎಂದು ಅವರು ಹೇಳಿದರು.

ಮುಖಂಡರಾದ ರಣಧೀರ ಹೊಸಮನಿ, ಸಂದೀಪ ಕಟ್ಟಿ, ಸಾಯಿನಾಥ ಪರಶುರಾಮ, ಪರಶುರಾಮ ಮಂಗಳೂರಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.