ಮಂಗಳವಾರ, ಅಕ್ಟೋಬರ್ 27, 2020
28 °C

ಮುಂಗಡ ಟಿಕೆಟ್‌, ತಿಂಗಳ ಪಾಸ್‌ ಕೌಂಟರ್‌ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್‌ ಕಾಯ್ದಿರಿಸುವ ಕೌಂಟರ್‌ ಹಾಗೂ ತಿಂಗಳ ರಿಯಾಯಿತಿ ಪಾಸ್‌ ವಿತರಣಾ ಕೌಂಟರ್‌ಗಳನ್ನು ಇಲ್ಲಿನ ಕೇಂದ್ರ ಬಸ್‌ ನಿಲ್ದಾಣದಲ್ಲಿ ಶನಿವಾರ ಆರಂಭಿಸಲಾಯಿತು.‌

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ವಿಭಾಗ–2ರಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಆರಂಭಿಸಿದ ಕೌಂಟರ್‌ಗಳಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಡಿ.ಕೊಟ್ರಪ್ಪ ಹಾಗೂ ಉಪ ಮುಖ್ಯ ಲೆಕ್ಕಾಧಿಕಾರಿ ಶ್ರೀದೇವಿ ಚಾಲನೆ ನೀಡಿದರು.‌ ಮೂರೂವರೆ ತಿಂಗಳ ಲಾಕ್‌ಡೌನ್‌ ಬಳಿಕ ಈ ಕೌಂಟರ್‌ಗಳನ್ನು ಇದೇ ಮೊದಲ ಬಾರಿಗೆ ತೆರೆಯಲಾಗುತ್ತಿದೆ.

ಆನ್‌ಲೈನ್‌ನಲ್ಲಿ ಟಿಕೆಟ್‌ ಕಾಯ್ದಿರಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಲಿದೆ. ಇದು ಸಾಧ್ಯವಾಗದ ಹಲವರು ಬಸ್‌ ನಿಲ್ದಾಣಕ್ಕೆ ಬಂದು ವಿಚಾರಿಸಿಕೊಂಡು ಹೋಗುತ್ತಿದ್ದಾರೆ. ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಇ–ಪೇಮೆಂಟ್‌ ಮೂಲಕ ಮುಂಗಡ ಟಿಕೆಟ್‌ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ.

ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ, ವಿಭಾಗೀಯ ಸಂಚಾರ ಅಧಿಕಾರಿ ಬೈಲಪ್ಪ ಬಿರಾದಾರ, ಲೆಕ್ಕಾಧಿಕಾರಿ ಮಹಾಂತೇಶ ಕರಾಳೆ, ಸಂಖ್ಯಾಧಿಕಾರಿ ಮಲ್ಲಿಕಾರ್ಜುನ ಜೋಗೂರ, ಆಡಳಿತಾಧಿಕಾರಿ ಗುರುಲಿಂಗಪ್ಪ ಪರುತಾಬಾದ್‌, ಸಂಸ್ಥೆಯ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿದ್ಧಣ್ಣ ಸಿಕೇದ ಕೋಳಕೂರ ಹಾಗೂ ಕಲಬುರ್ಗಿ ವಿಭಾಗದ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು