ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಿಡಿಒ ನೇಮಕಾತಿ: ವಯೋಮಿತಿ ಸಡಿಲಿಸಿ’

Published 10 ಮೇ 2024, 15:56 IST
Last Updated 10 ಮೇ 2024, 15:56 IST
ಅಕ್ಷರ ಗಾತ್ರ

ಕಲಬುರಗಿ: ‘ಗ್ರಾಮೀಣ ಅಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆಯಲ್ಲಿನ ಉಳಿಕೆ ವೃಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಬೇಕು ಹಾಗೂ 3 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಮಾಡಬೇಕು’ ಎಂದು ವಯೋಮಿತಿ ಮೀರಿದ ಅಭ್ಯರ್ಥಿಗಳು ಆಗ್ರಹಿಸಿದರು.

‘ಸುಮಾರು 7 ವರ್ಷಗಳಿಂದ ಪಿಡಿಒ ನೇಮಕಾತಿ ಅಧಿಸೂಚನೆಯಾಗಿರಲಿಲ್ಲ. ಈಗ ಅಧಿಸೂಚನೆಯಾಗಿದ್ದು, ವಯೋಮಿತಿ ಮಿರಿರುವ ಕಾರಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೆಎಎಸ್‌ ಮಾದರಿಯಲ್ಲಿ ಎಲ್ಲ ಸಿ ವೃಂದದ ಹುದ್ದೆಗಳಿಗೆ ವಯೋಮಿತಿ ಸಡಿಲಿಸಬೇಕು’ ಎಂದು ಸಿದ್ದಣ್ಣ ಹಂದನೂರು, ರಾಜೇಂದ್ರ ತೆಲ್ಲೂರ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

‘ಕರೊನಾ ಕಾರಣದಿಂದಾಗಿ ಹೆಚ್ಚಿನ ನೇಮಕಾತಿಗಳಿಗೆ ಅಧಿಸೂಚನೆ ಆಗಿಲ್ಲ. ಇದರಿಂದ ಲಕ್ಷಾಂತರ ಅಭ್ಯರ್ಥಿಗಳು ನೌಕರಿಯಿಂದ ವಂಚಿತರಾಗುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಸ್ಪಂದಿಸಿಲ್ಲ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಚಿಂತಕರ ವೇದಿಕೆಯ ಸೈಬಣ್ಣ ಜಮಾದಾರ, ಬಿ.ಎಂ. ರಾವೂರ, ಪ್ರಕಾಶ ಹೊಟ್ಕರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT