ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಳಂದ | ಬಿಸಿಲಿನಲ್ಲೂ ಬತ್ತದ ಉತ್ಸಾಹ; ಶಾಂತಿಯುತ ಮತದಾನ

Published 7 ಮೇ 2024, 16:16 IST
Last Updated 7 ಮೇ 2024, 16:16 IST
ಅಕ್ಷರ ಗಾತ್ರ

ಆಳಂದ: ತಾಲ್ಲೂಕಿನಲ್ಲಿ ಮಂಗಳವಾರ ಬೀದರ್ ಲೋಕಸಭೆ ಚುನಾವಣೆಗೆ ನಡೆದ ಮತದಾನ ಶಾಂತಿಯುತವಾಗಿ ಜರುಗಿತು.

ಒಟ್ಟು 254 ಮತಗಟ್ಟೆ ಕೇಂದ್ರಗಳಲ್ಲಿ ಶಾಂತಿಯುವಾಗಿ ಮತದಾನ ಪ್ರಕ್ರಿಯೆ ನಡೆಯಿತು. 

ಪಟ್ಟಣದ ಸರ್ಕಾರಿ ಪಿಯು ಕಾಲೇಜು ಮತಗಟ್ಟೆಯಲ್ಲಿ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಅಂಗವಿಕಲರು, ವೃದ್ಧರಿಗೆ ಹಕ್ಕು ಚಲಾಯಿಸಲು ನೆರವಾದರು.

‘ಹಡಲಗಿ ಮತಗಟ್ಟೆ ಕೇಂದ್ರ ಮತ್ತು ಆಳಂದ 84 ಮತಗಟ್ಟೆ ಕೇಂದ್ರದಲ್ಲಿ ಆರಂಭದಲ್ಲಿ ಮತಯಂತ್ರದ ಸಮಸ್ಯೆ ಕಂಡು ಬಂದು.ಉಳಿದಂತೆ ಎಲ್ಲಡೆ ಮತದಾನ ಸುಗಮವಾಗಿ ನಡೆದಿದೆ’ ಎಂದು ಚುನಾವಣಾ ಅಧಿಕಾರಿ ಮಹಾಂತೇಶ ಮುಳಗುಂದಾ ತಿಳಿಸಿದರು.

ತಾಲ್ಲೂಕಿನ ಸರಸಂಬಾ ಗ್ರಾಮದ ಮತಗಟ್ಟೆ ಕೇಂದ್ರದಲ್ಲಿ ಮುಖ್ಯಮಂತ್ರಿ ಸಲಹೆಗಾರ, ಶಾಸಕ ಬಿ.ಆರ್.ಪಾಟೀಲ ಅವರು ಕುಟುಂಬ ಸಮೇತ ಮತ ಚಲಾಯಿಸಿದರು. ಮಾಜಿ ಶಾಸಕ ಸುಭಾಷ ಗುತ್ತೇದಾರ ಅವರು ತಡಕಲ ಗ್ರಾಮದ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದರೆ, ಅಭಿನವ ಶಿವಲಿಂಗ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ ಮಾದನ ಹಿಪ್ಪರಗಿ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದರು. ಹಿರೇಮಠದ ಸಿದ್ದೇಶ್ವರ ಸ್ವಾಮೀಜಿ, ಚನ್ನಬಸವ ಪಟ್ಟದೇವರು ಆಳಂದದ ಮತಗಟ್ಟೆ ಕೇಂದ್ರದಲ್ಲಿ ತಮ್ಮ ಮತದಾನ ಮಾಡಿದರು.

ಡಿವೈಸ್ಪಿ ಮಹ್ಮದ್‌ ಶರೀಫ್‌, ಸಿಪಿಐ ಸಿದ್ದರಾಮಯ್ಯ, ಪಿಐ ಮಹಾದೇವ ಪಂಚಮುಖಿ, ಪಿಎಸ್‌ ಐ ಶರಣಪ್ಪ ಕೊಡ್ಲಾ, ಭೀಮಾಶಂಕರ ಬಂಕ್ಲಿ ಮತ್ತಿತರ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.

ಆಳಂದ ತಾಲ್ಲೂಕಿನ ನಿರಗುಡಿ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಲು ಸರದಿಯಲ್ಲಿ ನಿಂತಿದ್ದ ಮಹಿಳೆಯರು
ಆಳಂದ ತಾಲ್ಲೂಕಿನ ನಿರಗುಡಿ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಲು ಸರದಿಯಲ್ಲಿ ನಿಂತಿದ್ದ ಮಹಿಳೆಯರು
ಆಳಂದ ತಾಲ್ಲೂಕಿನ ತಡಕಲ ಗ್ರಾಮದ ಮತಗಟ್ಟೆ ಕೇಂದ್ರದಲ್ಲಿ ಮಾಜಿ ಶಾಸಕ ಸುಭಾಷ ಗುತ್ತೇದಾರ ಮತ ಚಲಾಯಿಸಿದರು
ಆಳಂದ ತಾಲ್ಲೂಕಿನ ತಡಕಲ ಗ್ರಾಮದ ಮತಗಟ್ಟೆ ಕೇಂದ್ರದಲ್ಲಿ ಮಾಜಿ ಶಾಸಕ ಸುಭಾಷ ಗುತ್ತೇದಾರ ಮತ ಚಲಾಯಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT