ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇವರ್ಗಿ | ಬಸವೇಶ್ವರರ ಭಾವಚಿತ್ರಕ್ಕೆ ಅಪಮಾನ: ಪ್ರತಿಭಟನೆ

Published 13 ಅಕ್ಟೋಬರ್ 2023, 12:55 IST
Last Updated 13 ಅಕ್ಟೋಬರ್ 2023, 12:55 IST
ಅಕ್ಷರ ಗಾತ್ರ

ಜೇವರ್ಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಅಪಮಾನ ಖಂಡಿಸಿ ಶುಕ್ರವಾರ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೀದರ- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು ಅರ್ಧಗಂಟೆ ಕಾಲ ತಡೆದಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.

ಜೇವರ್ಗಿ ತಾಲ್ಲೂಕು ವೀರಶೈವ ಸಮಾಜದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ ಸೀರಿ ಮಾತನಾಡಿ, ‘ಬಸವೇಶ್ವರರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದರಿಂದ ವೀರಶೈವ ಸಮಾಜಕ್ಕೆ ನೋವು ಉಂಟಾಗಿದೆ. ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವ ಮೂಲಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ಗಡಿಪಾರು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಗ್ರೇಡ್-2 ತಹಶೀಲ್ದಾರ್ ಪ್ರಸನ್ನಕುಮಾರ ಮೋಘೆಕರ್ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ವೀರಶೈವ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ಧರಾಮ ಅಂಗಡಿ, ಬಸವಕೇಂದ್ರ ತಾಲ್ಲೂಕು ಘಟಕದ ಅಧ್ಯಕ್ಷ ಶರಣಬಸವ ಕಲ್ಲಾ, ಶಿವನಗೌಡ ಹಂಗರಗಿ, ಜಗದೀಶ ಪಾಟೀಲ ನರಿಬೋಳ, ಜಾಗತಿಕ ಲಿಂಗಾಯತ ಮಹಾಸಭಾ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ಅವಂಟಿ, ಷಣ್ಮುಖಪ್ಪ ಹಿರೇಗೌಡ, ಗುರುಲಿಂಗಯ್ಯ ಹಿರೇಮಠ, ಗುಂಡು ಸಾಹು ಗೋಗಿ, ಸಾಹೇಬಗೌಡ ಕಲ್ಲಾ, ಕಂಟೆಪ್ಪ ಮಾಸ್ತರ ಹರವಾಳ, ತಿಪ್ಪಣ್ಣ ಹಡಪದ, ತಿಪ್ಪಣ್ಣ ಗುಂಡಗುರ್ತಿ, ಮಲ್ಲಿಕಾರ್ಜುನ ಬಿರಾದಾರ ಸೊನ್ನ, ಭಗವಂತರಾಯ ಶಿವಣ್ಣಕರ್, ಶ್ರೀಶೈಲಗೌಡ ಮಾಲಿಪಾಟೀಲ, ಬಸವರಾಜ ಹೂಗಾರ ಯಡ್ರಾಮಿ, ಮಹಾಂತಗೌಡ ಪಾಟೀಲ ಚನ್ನೂರ, ಸಂಗಣ್ಣಗೌಡ ಗುಳ್ಯಾಳ, ಅನೀಲ ರಾಂಪೂರ, ಪ್ರಕಾಶ ಪುಲಾರೆ, ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪಟ್ಟಣದ ನೂರಾರು ಜನತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT