ಶುಕ್ರವಾರ, ಅಕ್ಟೋಬರ್ 7, 2022
28 °C

ಕಲಬುರಗಿ: ಹಳ್ಳದ ನೀರಿಗೆ ಕೊಚ್ಚಿ ಹೋದ ಟ್ರ್ಯಾಕ್ಟರ್, ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಇಲ್ಲಿನ ಕಡಣಿ ಗ್ರಾಮದ‌ ಬಳಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟುವ ವೇಳೆ ಟ್ರ್ಯಾಕ್ಟರ್ ಸಮೇತ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದು‌, ಒಬ್ಬ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಕಡಣಿ ಗ್ರಾಮದ ಸಿದ್ದಪ್ಪ ಕೆರಂಬಗಿ ಎಂಬುವವರು ಮೃತಪಟ್ಟಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕಡಣಿ ಹೊರವಲಯದ ಹಳ್ಳ ರಭಸವಾಗಿ ಹರಿಯುತ್ತಿತ್ತು. ತುಂಬಿ ಹರಿಯುತ್ತಿದ್ದ ಹಳದಲ್ಲೇ ಟ್ರ್ಯಾಕರ್ ದಾಟಿಸುವ ದುಸ್ಸಾಹಸವನ್ನು ಚಾಲಕ ಮಾಡಿದ ಎಂದು ಪೊಲೀಸರು ತಿಳಿಸಿದ್ದಾರೆ.

ನೀರಿನ ರಭಸಕ್ಕೆ ಸಿಲುಕಿದ ಟ್ರ್ಯಾಕ್ಟರ್ ಹಳ್ಳದಲ್ಲಿ ಕೊಚ್ಚಿ ಹೋಗಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಇಬ್ಬರ ಪೈಕಿ ಚಾಲಕ ಮುಳ್ಳು ಕಂಟಿ ಹಿಡಿದು ಪಾರಾದರು. ಆದರೆ, ಇನ್ನೊಬ್ಬ ಯುವಕ ನಾಪತ್ತೆಯಾದರು. ರಾತ್ರಿಯಿಡೀ ಶೋಧಕಾರ್ಯ ನಡೆಸಿದಾಗ ಸುಮಾರು ಒಂದು ಕಿ. ಮೀ. ದೂರದ ಮುಳ್ಳುಕಂಟಿಗೆ ಸಿಲುಕಿದ‌‌ ಯುವಕನ ಮೃತ ದೇಹ ಪತ್ತೆಯಾಯಿತು ಎಂದಿದ್ದಾರೆ.

ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು