ಚಿಂಚೋಳಿ: ಅಪಘಾತದಲ್ಲಿ ವ್ಯಕ್ತಿ ಸಾವು

ಚಿಂಚೋಳಿ (ಕಲಬುರಗಿ ಜಿಲ್ಲೆ): ಚಿಂಚೋಳಿಯಿಂದ ಮಿರಿಯಾಣಕ್ಕೆ ತೆರಳುತ್ತಿದ್ದಾಗ ಬೈಕ್ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ರಾಣೋಜಿರಾವ್ ಶಿವಾಜಿರಾವ್ (30) ಮೃತಪಟ್ಟವರು.
ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದರು.
ಸರ್ಕಲ್ ಪೊಲೀಸ್ ಇನ್ ಸ್ಪೆಕ್ಟರ್ ಮಹಾಂತೇಶ ಪಾಟೀಲ, ಸಬ್ ಇನ್ ಸ್ಪೆಕ್ಟರ್ ಜಗದೀಶ ನಾಯಕ ಭೇಟಿ ನೀಡಿ ಪರಿಶೀಲಿಸಿದರು.
ಮಿರಿಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.