ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಂ ಕ್ವಾರಂಟೈನ್ ಉಲ್ಲಂಘನೆ: 28 ಮಂದಿ ಮೇಲೆ ಎಫ್ಐಆರ್

Last Updated 22 ಜೂನ್ 2020, 9:05 IST
ಅಕ್ಷರ ಗಾತ್ರ

ಕಲಬುರ್ಗಿ: ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಮನೆಯಿಂದ ಹೊರಗೆ ಓಡಾಡಿದ 28 ಮಂದಿಯ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.

ಹೊರರಾಜ್ಯಗಳಿಂದ ಜಿಲ್ಲೆಗೆ ಬಂದವರು ಹಾಗೂ ಕೋವಿಡ್ ಸೋಂಕಿತರ ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ 14 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಹೀಗೆ ಕ್ವಾರಂಟೈನ್ ಆದ 28 ಮಂದಿ ಪದೇಪದೇ ಹೊರಗೆ ಓಡಾಡಿ ನಿಯಮ ಉಲ್ಲಂಘಿಸಿದ್ದು ಖಚಿತವಾದ ಕಾರಣ ಪ್ರಕರಣ ದಖಲಿಸಲಾಗಿದೆ.

ಅಲ್ಲದೇ ಮೊದಲಬಾರಿ ನಿಯಮ ಉಲ್ಲಂಘಿಸಿದವರನ್ನೂ ಮರಳಿ ಸಾಂಸ್ಥಿಕ ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಓಡಾಡಿದ 8 ವಲಸಿಗರನ್ನು ಮರಳಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT