ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನೆಪತ್ರಿಕೆ ಬಯಲು ವದಂತಿ: ಪಿಎಚ್.ಡಿ ಅಭ್ಯರ್ಥಿಗಳ ಪ್ರತಿಭಟನೆ

ಗುಲಬರ್ಗಾ ವಿಶ್ವವಿದ್ಯಾಲಯ
Last Updated 12 ಮಾರ್ಚ್ 2020, 7:31 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ 9 ಪಿಎಚ್‌.ಡಿ. ಸೀಟುಗಳಿಗೆ ಗುರುವಾರ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಲಕೋಟೆಯಿಂದ ಬಿಚ್ಚದೇ ಹಾಗೆಯೇ ಕೊಡಲಾಗಿದೆ. ಈಗಾಗಲೇ ತಮಗೆ ಬೇಕಾದವರಿಗೆ ಪ್ರಶ್ನೆಪತ್ರಿಕೆಯನ್ನು ಬಹಿರಂಗ ಮಾಡಲಾಗಿದೆ ಎಂದು ಆರೋಪಿಸಿ 190ಕ್ಕೂ ಅಧಿಕ ಅಭ್ಯರ್ಥಿಗಳು ಮೌಲ್ಯಮಾಪನ ಕುಲಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಿಎಚ್.ಡಿ. ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ವಿಶ್ವವಿದ್ಯಾಲಯ ವಿಫಲವಾಗಿದೆ. ಪ್ರಶ್ನೆಪತ್ರಿಕೆ ಬಹಿರಂಗಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೌಲ್ಯಮಾಪನ ಕುಲಸಚಿವ ಪ್ರೊ.ಸಂಜೀವಕುಮಾರ್ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಮೊದಲ ಬಾರಿ ಪ್ರವೇಶ ಪರೀಕ್ಷೆ ನಡೆದಾಗ ಪ್ರಶ್ನೆಪತ್ರಿಕೆಯನ್ನು ಕನ್ನಡ ಭಾಷೆಯಲ್ಲಿ ಕೊಡುವ ಬದಲು ಬರೀ ಇಂಗ್ಲಿಷ್‌ ಭಾಷೆಯಲ್ಲಿ ಪ್ರಶ್ನೆಪತ್ರಿಕೆಯನ್ನು ಮಾತ್ರ ಕೊಡಲಾಗಿತ್ತು. ಹೀಗಾಗಿ ಮುಂದೂಡಲಾಗಿತ್ತು.

ಎರಡನೇ ಬಾರಿ ಪರೀಕ್ಷೆ ನಡೆದ ಬಳಿಕ ನೀಡಲಾದ ಕೀ ಉತ್ತರದಲ್ಲಿ ಶೇ 80ರಷ್ಟು ಉತ್ತರಗಳು ತಪ್ಪಿದ್ದವು. ಅದನ್ನು ಸರಿಪಡಿಸಿ ಮತ್ತೆ ಪ್ರಕಟಿಸುವ ಬದಲು ಪರೀಕ್ಷೆಯನ್ನೇ ಮುಂದೂಡಲಾಗಿತ್ತು.

ಇದೀಗ ಮೂರನೇ ಬಾರಿಗೆ ಪ್ರಶ್ನೆಪತ್ರಿಕೆಯನ್ನು ಬಹಿರಂಗಗೊಳಿಸಿದ ಆರೋಪಗಳು ಕೇಳಿ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT