ಶುಕ್ರವಾರ, ಜೂನ್ 5, 2020
27 °C
ಈಗಾಗಲೇ ವಿವಿಧ ಕಾರಣಗಳಿಂದ ಎರಡು ಬಾರಿ ಮುಂದೂಡಿಕೆಯಾಗಿದ್ದ ಪರೀಕ್ಷೆ

ಪ್ರಶ್ನೆಪತ್ರಿಕೆ ಬಯಲು ವದಂತಿ; ಪಿಎಚ್.ಡಿ. ಅಭ್ಯರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ 9 ಪಿಎಚ್‌.ಡಿ. ಸೀಟುಗಳಿಗೆ ಗುರುವಾರ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಲಕೋಟೆಯಿಂದ ಬಿಚ್ಚದೇ ಹಾಗೆಯೇ ಕೊಡಲಾಗಿದೆ. ಈಗಾಗಲೇ ತಮಗೆ ಬೇಕಾದವರಿಗೆ ಪ್ರಶ್ನೆಪತ್ರಿಕೆಯನ್ನು ಬಹಿರಂಗ ಮಾಡಲಾಗಿದೆ ಎಂದು ಆರೋಪಿಸಿ 190ಕ್ಕೂ ಅಧಿಕ ಅಭ್ಯರ್ಥಿಗಳು ಮೌಲ್ಯಮಾಪನ ಕುಲಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಿಎಚ್.ಡಿ. ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ವಿಶ್ವವಿದ್ಯಾಲಯ ವಿಫಲವಾಗಿದೆ. ಪ್ರಶ್ನೆಪತ್ರಿಕೆ ಬಹಿರಂಗಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೌಲ್ಯಮಾಪನ ಕುಲಸಚಿವ ಪ್ರೊ.ಸಂಜೀವಕುಮಾರ್ ಎಂ. ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಮೊದಲ ಬಾರಿ ಪ್ರವೇಶ ಪರೀಕ್ಷೆ ನಡೆದಾಗ ಪ್ರಶ್ನೆಪತ್ರಿಕೆಯನ್ನು ಕನ್ನಡ ಭಾಷೆಯಲ್ಲಿ ಕೊಡುವ ಬದಲು ಬರೀ ಇಂಗ್ಲಿಷ್‌ ಪ್ರಶ್ನೆಪತ್ರಿಕೆಯನ್ನು ಮಾತ್ರ ಕೊಡಲಾಗಿತ್ತು. ಹೀಗಾಗಿ ಮುಂದೂಡಲಾಗಿತ್ತು. ಎರಡನೇ ಬಾರಿ ಪರೀಕ್ಷೆ ನಡೆದ ಬಳಿಕ ನೀಡಲಾದ ಕೀ ಉತ್ತರದಲ್ಲಿ ಶೇ 80ರಷ್ಟು ಉತ್ತರಗಳು ತಪ್ಪಿದ್ದವು. ಅದನ್ನು ಸರಿಪಡಿಸಿ ಮತ್ತೆ ಪ್ರಕಟಿಸುವ ಬದಲು ಪರೀಕ್ಷೆಯನ್ನೇ ಮುಂದೂಡಲಾಗಿತ್ತು. ಇದೀಗ ಮೂರನೇ ಬಾರಿಗೆ ಪ್ರಶ್ನೆಪತ್ರಿಕೆಯನ್ನು ಬಹಿರಂಗಗೊಳಿಸಿದ ಆರೋಪಗಳು ಕೇಳಿ ಬಂದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು