ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರಿಗೆ ಬಿಜೆಪಿಯಿಂದ ಹಣ ಡಿಜಿಟಲ್‌ ಪಾವತಿ: ಪ್ರಿಯಾಂಕ್ ಖರ್ಗೆ ದೂರು

Published 7 ಮೇ 2024, 14:40 IST
Last Updated 7 ಮೇ 2024, 14:40 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಚಿತ್ತಾಪುರ ಹಾಗೂ ಸೇಡಂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಮತದಾರರಿಗೆ ‘ಫೋನ್ ಪೇ’ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಬಿಜೆಪಿಯವರು ಸಿದ್ಧಪಡಿಸಿದ್ದಾರೆ ಎನ್ನಲಾದ ಮತದಾರರ ವಿವರದ ಚೀಟಿ ಹಾಗೂ ಹಣ ವರ್ಗಾವಣೆ ಮಾಡಿರುವುದರ ಸ್ಕ್ರೀನ್‌ಶಾಟ್ ಪ್ರಕಟಿಸಿರುವ ಪ್ರಿಯಾಂಕ್, ‘ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಪಾವತಿ ಅಭಿಯಾನವನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ದಿದ್ದು, ಮತದಾರರಿಗೆ ಆನ್‌ಲೈನ್ ಮೂಲಕ ಹಣ ಪಾವತಿ ಮಾಡುತ್ತಿದ್ದಾರೆ’ ಎಂದು ದೂರಿದ್ದಾರೆ.

ತಿಮ್ಮಪ್ಪ ಎಂಬುವವರಿಗೆ ₹ 350 ಪಾವತಿ ಮಾಡಿದ ವಿವರವನ್ನು ಪ್ರಿಯಾಂಕ್ ಹಂಚಿಕೊಂಡಿದ್ದಾರೆ. ಇಂತಹ ಇನ್ನಷ್ಟು ದಾಖಲೆಗಳೊಂದಿಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT