ಶನಿವಾರ, ಜುಲೈ 24, 2021
26 °C

ಜಿಮ್ಸ್‌ ಆವರಣದಲ್ಲಿ ಹಂದಿಗಳ ಓಡಾಟ: ಪ್ರಿಯಾಂಕ್‌ ಬೇಸರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿನ ಜಿಮ್ಸ್‌ ಆಸ್ಪತ್ರೆ ಆವರಣ ಹಂದಿಗಳ ತಾಣವಾಗಿರುವುದಕ್ಕೆ ಶಾಸಕ ಪ್ರಿಯಾಂಕ್‌ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಮಾಧ್ಯಮಗಳಲ್ಲಿ ಜಿಮ್ಸ್‌ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಈ ರೀತಿ ಕುಖ್ಯಾತಿಯಾಗಲು ಬಿಜೆಪಿ ಕಾರಣ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಟ್ವೀಟ್‌ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಾಸಕರು, ‘ದೇಶದಲ್ಲಿಯೇ ಮೊದಲ ಕೋವಿಡ್ ಸಾವು ವರದಿಯಾಗಿರುವುದು ಕಲಬುರ್ಗಿಯಲ್ಲಿ. ಇಷ್ಟಾದರೂ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡದೆ ನಾವೆಲ್ಲ ಯಾವ ಪಾಠ ಕಲಿತಿದ್ದೇವೆ? ಬೇರೆಯವರಿಗೆ ಏನು ಸಂದೇಶ ರವಾನಿಸಿದ್ದೇವೆ? ಯಾವ ನಿಗದಿತ ನಿಯಮಗಳು ಪಾಲನೆಯಾಗಿವೆ’ ಎಂದು ಪ್ರಶ್ನಿಸಿದ್ದಾರೆ. 

‘ಬಿಜೆಪಿ ಸರ್ಕಾರ ಆರೋಗ್ಯ ಸೌಕರ್ಯಗಳನ್ನು ವೃದ್ಧಿಸುವ ಬದಲು ಲಾಭ ಮಾಡಿಕೊಳ್ಳುವುದರಲ್ಲಿ ತೊಡಗಿಕೊಂಡಿದೆ’ ಎಂದು ಪ್ರಿಯಾಂಕ್ ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು