ಕಲಬುರಗಿ: ಹತ್ತು ವರ್ಷದ ಬಾಲಕಿಯೊಬ್ಬಳನ್ನು ವಿವಸ್ತ್ರಗೊಳಿಸಿ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ತಾಲ್ಲೂಕಿನ ತಾಂಡಾವೊಂದರ ನಿವಾಸಿ ಸೋನು ತಾರಾಸಿಂಗ್ ಜಾಧವ್ (19) ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹ 30 ಸಾವಿರ ದಂಡ ವಿಧಿಸಿದೆ.

2024ರ ಆಗಸ್ಟ್ 9ರಂದು ಮನೆಯಲ್ಲಿ ಜೋಕಾಲಿ ಆಡುತ್ತಿದ್ದ ಬಾಲಕಿಗೆ, ‘ಮನೆ ಮೇಲೆ ಗಿಡಗಳಿಗೆ ನೀರು ಹಾಕೋಣ ಬಾ’ ಎಂದು ಪುಸಲಾಯಿಸಿ ಮೇಲಿನ ಕೊಠಡಿಗೆ ಕರೆದೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದಾನೆ. ಸಂಬಂಧದಲ್ಲಿ ಚಿಕ್ಕಪ್ಪನಾಗಬೇಕಾದ ಸೋನು ಜಾಧವ್ ಬಾಲಕಿ ಅಳುತ್ತಿದ್ದರೂ ಕೇಳದೇ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಲದೆಂಬಂತೆ ಸೋನು ಕಡೆಯವರು ನನ್ನ ಮಗ ಮಾಡಿದ್ದು ತಪ್ಪಾಗಿದ್ದು, ಬೇಕಿದ್ದರೆ ಬಾಲಕಿಗೆ ತಾಳಿ ಕಟ್ಟಿ ಕರೆದುಕೊಂಡು ಹೋಗಲು ತಯಾರಿದ್ದೇವೆ ಎಂದು ಹೇಳಿದ್ದಾರೆ. ಇದರಿಂದ ಕೆರಳಿದ ಪೋಷಕರು, ಬಾಲಕಿಯು ಸೋನುಗೆ ಅಣ್ಣನ ಮಗಳಾಗಬೇಕು. ಮದುವೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿ ಮದುವೆ ಪ್ರಸ್ತಾಪವನ್ನು ನಿರಾಕರಿಸಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪಿಎಸ್ಐ ರೇಣುಕಾದೇವಿ ಹಾಗೂ ಪಿಐ ಸುಶೀಲಕುಮಾರ್ ಅವರು ಸೋನು ಜಾಧವ್ ವಿರುದ್ಧ ಬಿಎನ್ಎಸ್ ಕಾಯ್ದೆ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ಹಾಗೂ ₹ 30 ಸಾವಿರ ದಂಡ ವಿಧಿಸಿದರು. ದಂಡದ ಮೊತ್ತವನ್ನು ಪಾವತಿಸಲು ವಿಫಲನಾದಲ್ಲಿ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹ 7 ಲಕ್ಷ ಪರಿಹಾರವನ್ನು ತೀರ್ಪು ಪ್ರಕಟವಾದ ಒಂದು ತಿಂಗಳೊಳಗಾಗಿ ನೀಡಬೇಕು ಎಂದು ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.