ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ: 17 ವರ್ಷದ ಬಾಲಕಿ ಆತ್ಮಹತ್ಯೆ

Published : 1 ಅಕ್ಟೋಬರ್ 2024, 2:49 IST
Last Updated : 1 ಅಕ್ಟೋಬರ್ 2024, 2:49 IST
ಫಾಲೋ ಮಾಡಿ
Comments

ಕಲಬುರಗಿ: ಅತ್ಯಾಚಾರದಿಂದ ಮನನೊಂದು 17 ವರ್ಷದ ತನ್ನ ಮಗಳು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದ ಬಾಲಕಿಯ ಪೋಷಕ, ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾಸ್ಕರ ಸೂರ್ಯಕಾಂತ ವಿರುದ್ಧ ಚಿಂಚೋಳಿ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ.

ಬಾಲಕಿಯು ಚಿಂಚೋಳಿ ತಾಲ್ಲೂಕಿನ ಖಾಸಗಿ ಕಾಲೇಜು ಒಂದರಲ್ಲಿ ಪಿಯು ಓದುತ್ತಿದ್ದಳು. ಆರೋಪಿ ಭಾಸ್ಕರ, ಮನೆಯೊಂದರಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಈ ಕೃತ್ಯವನ್ನು ನೆರೆ ಮನೆಯವರು ನೋಡುತ್ತಿದ್ದಂತೆ ಅಲ್ಲಿಂದ ಭಾಸ್ಕರ ಓಡಿ ಹೋದನು. ನೆರೆ ಮನೆಯವರು ಸಹ ಅವನ ಹಿಂದೆಯೇ ಓಡಿ ಹೋದರು, ಆತ ಸಿಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯದಿಂದ ಮನನೊಂದ ಯುವತಿಯು ಮನೆಯಲ್ಲಿ ನೇಣು ಹಾಕಿಕೊಂಡು ಒದ್ದಾಡುತ್ತಿದ್ದಳು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ. ಭಾಸ್ಕರ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT