ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಅತ್ಯಾಚಾರಿ ಮಗನಿಗೆ 20 ವರ್ಷ; ಸಹಕರಿಸಿದ್ದ ಅಪ್ಪನಿಗೆ 10 ವರ್ಷ ಜೈಲು

ಪೋಕ್ಸೊ ಪ್ರಕರಣ: ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಆದೇಶ
Published 1 ಜುಲೈ 2024, 14:30 IST
Last Updated 1 ಜುಲೈ 2024, 14:30 IST
ಅಕ್ಷರ ಗಾತ್ರ

ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಹಾಗೂ ಈ ಕೃತ್ಯಕ್ಕೆ ಸಹಕರಿಸಿದ್ದ ಆತನ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರಗಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

‍ಅತ್ಯಾಚಾರ ಎಸಗಿದ ದುಷ್ಕೃತ್ಯಕ್ಕಾಗಿ ಯಲ್ಲಪ್ಪ ಅಲಿಯಾಸ್‌ ಯಲ್ಲಾಲಿಂಗ ಯಡ್ರಾಮಿಗೆ 20 ವರ್ಷ ಜೈಲು, ₹20 ಸಾವಿರ ದಂಡ ವಿಧಿಸಲಾಗಿದೆ. ಕೃತ್ಯಕ್ಕೆ ನೆರವಾಗಿದ್ದ ತಂದೆ ದೇವಪ್ಪ ಅಲಿಯಾಸ್‌ ದೇವಿಂದ್ರಪ್ಪ ಯಡ್ರಾಮಿಗೆ 10 ವರ್ಷ ಜೈಲು ಶಿಕ್ಷೆ, ₹10 ಸಾವಿರ ದಂಡ ವಿಧಿಸಿ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌(ವಿಶೇಷ ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಆದೇಶಿಸಿದ್ದಾರೆ. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹7 ಲಕ್ಷ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ: 2023ರ ಮಾರ್ಚ್‌ 26ರ ನಸುಕಿನ 12.18ಕ್ಕೆ ಯಲ್ಲಪ್ಪನು ಬಾಲಕಿಗೆ ಫೋನ್‌ ಮಾಡಿ ಕರೆಸಿಕೊಂಡು, ‘ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ. ನಿನ್ನ ಬಿಟ್ಟು ಇರಲ್ಲ. ನಿನ್ನನ್ನು ಮದುವೆ ಮಾಡಿಕೊಳ್ಳುತ್ತೇನೆ’ ಎಂದು ಪುಸಲಾಯಿಸಿದ್ದ. ಬಾಲಕಿ ಒಪ್ಪಿರಲಿಲ್ಲ. ಆದರೆ, ಯಲ್ಲಪ್ಪನ ತಂದೆ ದೇವಪ್ಪ, ‘ಏನಾದರೂ ಸಮಸ್ಯೆ ಬಂದರೆ ನಾನು ನೋಡಿಕೊಳ್ಳುತ್ತೇನೆ’ ಎಂದು ಬಲವಂತದಿಂದ ಅವರಿಬ್ಬರನ್ನೂ ಆಟೊದಲ್ಲಿ ಕಲಬುರಗಿ ರೈಲು ನಿಲ್ದಾಣದ ತನಕ ಕರೆತಂದು ಸೊಲ್ಲಾಪುರದತ್ತ ಹೋಗುವ ರೈಲು ಹತ್ತಿಸಿದ್ದ. ಬಳಿಕ ಯಲ್ಲಪ್ಪನು ಬಾಲಕಿಯನ್ನು ಪುಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಿದ್ದ.

ಈ ಸಂಬಂಧ ನೆಲೋಗಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾಗಿದ್ದ ಜೇವರ್ಗಿ ಪೊಲೀಸ್‌ ಠಾಣೆಯ ಸಿಪಿಐ ಭೀಮನಗೌಡ ಎ.ಬಿರಾದಾರ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರಪ್ಪ ಬಿ.ತುಪ್ಪದ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT