ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು

Published 29 ಜನವರಿ 2024, 9:41 IST
Last Updated 29 ಜನವರಿ 2024, 9:41 IST
ಅಕ್ಷರ ಗಾತ್ರ

ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ಸೇಡಂ ತಾಲ್ಲೂಕಿನ ತೆಲ್ಕೂರ ಗ್ರಾಮದ ಜಗನ್ನಾಥ ಹಣಮಂತ ರಾಕನೋರ ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ 20 ವರ್ಷ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಅಪ್ರಾಪ್ತೆ ಎಂಬುದು ಗೊತ್ತಿದ್ದರೂ ಬಲವಂತವಾಗಿ ಕರೆದುಕೊಂಡು ಹೋಗಿ 2022ರ ಏಪ್ರಿಲ್ 14ರಿಂದ 27ರವರೆಗೆ ಗೃಹ ಬಂಧನದಲ್ಲಿಟ್ಟು ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದಲ್ಲದೇ, ದೇವಸ್ಥಾನವೊಂದರಲ್ಲಿ ಮದುವೆಯನ್ನೂ ಮಾಡಿಕೊಂಡಿದ್ದ. ಈ ಕುರಿತು ಪೋಷಕರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಸೇಡಂ ಸಿಪಿಐ ಆನಂದರಾವ್ ಎಸ್.ಎನ್. ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು. ಪೋಕ್ಸೊ ಕಾಯ್ದೆಯ ಶಿಕ್ಷೆಯ ಜೊತೆಗೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಎರಡು ವರ್ಷ ಜೈಲು ಹಾಗೂ ₹ 2 ಸಾವಿರ ದಂಡ, ಬಾಲಕಿಯನ್ನು ಅಪಹರಿಸಿದ ಅಪರಾಧಕ್ಕಾಗಿ 5 ವರ್ಷ ಜೈಲು, ₹ 5 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದರು.

ತೀರ್ಪು ಪ್ರಕಟವಾದ ತಿಂಗಳೊಳಗಾಗಿ ಬಾಲಕಿಯ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡುವಂತೆ ಕಾನೂನು ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT