ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ತರಬೇತಿ ಇನ್ನಷ್ಟು ವಿಸ್ತಾರ

ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪಸಿಂಗ್‌ ಭೇಟಿ
Last Updated 24 ಜನವರಿ 2021, 6:36 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪಸಿಂಗ್‌ ಖರೋಲಾ ಅವರು, ಐಜಿಆರ್‌ಯುಎ ಪೈಲಟ್‌ ತರಬೇತಿ ಚಟುವಟಿಕೆಗಳನ್ನು ಪರಿಶೀಲಿಸಿದರು.

‘ಇಂದಿರಾ ಗಾಂಧಿ ರಾಷ್ಟ್ರೀಯ ಉರಾನ್‌ ಅಕಾಡೆಮಿ (ಐಜಿಆರ್‌ಯು)ಯು ಇನ್ನೂ ಎರಡು ತರಬೇತಿ ವಿಮಾನಗಳನ್ನು ಕಲಬುರ್ಗಿಗೆ ಸ್ಥಳಾಂತರಿಸಲು ನಿರ್ಧರಿಸಿದೆ. ಆದ್ದರಿಂದ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಪೈಲಟ್‌ಗಳಿಗೆ ತರಬೇತಿ ನೀಡಬಹುದು’ ಎಂದು ಪ್ರದೀಪಸಿಂಗ್‌ ತಿಳಿಸಿದರು.

ವಿಮಾನ ನಿಲ್ದಾಣದ ಎಲ್ಲ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಧಿಕಾರಿಗಳು, ಐಜಿಆರ್‌ಯುಎ ತಂಡ ಮತ್ತು ಪೈಲಟ್ ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಹನ ನಡೆಸಿದರು.

ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಎಸ್.ಅಂಬರ್ ದುಬೆ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪಿ. ರಾಜಾ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್‌ ಸುಧಾಕರ ಲೋಖಂಡೆ, ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರ್ ರಾವ್‌ ಇದ್ದರು.

ಉತ್ತರ ಭಾರತದ ಹಲವಾರು ಸ್ಥಳಗಳಲ್ಲಿನ ಹವಾಮಾನ ವೈ‍ಪರೀತ್ಯದಿಂದಾಗಿ ಐಜಿಆರ್‌ಯುಎ ಪ್ರಾಯೋಗಿಕ ತರಬೇತಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಏಪ್ರಿಲ್‌ವರೆಗೆ ಸ್ಥಳಾಂತರಿಸಲಾಗಿದೆ. ಜ. 18ರಂದು ಒಟ್ಟು ನಾಲ್ಕು ವಿಮಾನಗಳು ಬಂದಿದ್ದು, ಆರು ಬೋಧಕರು 12 ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಶಾಶ್ವತ ತರಬೇತಿ ಶಾಲೆ ಸ್ಥಾಪಿಸಲು ಬಿಡ್ಡಿಂಗ್ ಪ್ರಕ್ರಿಯೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT