ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ

7
ಪ್ರತ್ಯೇಜ ರಾಜ್ಯ ಬೇಡಿಕೆ: ಪರ– ವಿರೋಧ ಪ್ರತಿಭಟನೆ

ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ

Published:
Updated:
Deccan Herald

ಕಲಬುರ್ಗಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿವಿಧ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸಿದವು.

ಕರುನಾಡ ಹೋರಾಟ ಸಮಿತಿ, ಉತ್ತರ ಕರ್ನಾಟಕ ಹೋರಾಟ ಸಮಿತಿಗಳು ಪರವಾಗಿ ಹಾಗೂ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೈನ್ಯದ ಕಾರ್ಯಕರ್ತರು ವಿರೋಧವಾಗಿ ಹೋರಾಟ ನಡೆಸಿದರು.

ಬಂದ್ ಪರವಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಘೋಷಣೆ ಕೂಗಿದ ಕರುನಾಡ ಹೋರಾಟ ಸಮಿತಿ ಕಾರ್ಯಕರ್ತನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.
ಇನ್ನೊಂದೆಡೆ, ಹೈದರಾಬಾದ್‌ ಕರ್ನಾಟಕ ಭಾಗದ ಆರು ಜಿಲ್ಲೆಗಳನ್ನು ಒಂಗೊಂಡ ‘ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ’ ರಚನೆಯ ಕೂಗೂ ಕೇಳಿಬಂತು. ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನಡೆಸಲು ತಯಾರಿ ನಡೆಸಿದ ಕೆಲ ಕಾರ್ಯಕರ್ತರನ್ನು ಪೊಲೀಸರು ಮುಂಚಿತವಾಗಿಯೇ ಬಂಧಿಸಿದರು.

ಸಂಘಟನೆ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ, ಶ್ವೇತಾ ಸಿಂಗ್‌, ಕವಿತಾ ಚವ್ಹಾಣ, ಇಂದಿರಾ ರೆಡ್ಡಿ, ವಕೀಲ ವಿನೋದ, ಸಂತೋಷ ಪಾಟೀಲ ಅವರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !