ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆಯ ಕಟ್ಟಡದಲ್ಲಿ ಇಸ್ಪೀಟ್ ಆಡಿದ ಆರೋಪದಡಿ ಐವರನ್ನು ಅಮಾನತು ಮಾಡಲಾಗಿದೆ.

ಠಾಣೆಯ ಐವರು ಸಿಬ್ಬಂದಿ ಇಸ್ಪೀಟ್ ಆಡಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಠಾಣೆಯ ಎಎಸ್ಐ ಮಹಿಮೂದ್ ಮಿಯಾ, ಹೆಡ್ ಕಾನ್ಸ್ಟೆಬಲ್ಗಳಾದ ನಾಗರಾಜ, ಸಾಯಿಬಣ್ಣ, ಇಮಾಮ್ ಮತ್ತು ಕಾನ್ಸ್ಟೆಬಲ್ ನಾಗಭೂಷಣ ಅವರನ್ನು ಅಮಾನತು ಮಾಡಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರು ಆದೇಶ ಹೊರಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಇಸ್ಪೀಟ್ ಆಟದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ, ಠಾಣೆಯ ಪಿಎಸ್ಐ ತಿರುಮಲೇಶ್ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ. ಯಾವುದೇ ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳ ಶಿಸ್ತು ಉಲ್ಲಂಘನೆಯ ಬಗ್ಗೆ ನಮ್ಮ ಸರ್ಕಾರ ಶೂನ್ಯ ಸಹನೆ ಹೊಂದಿದೆ. ಸಾರ್ವಜನಿಕ ಸೇವೆಯಲ್ಲಿ ಕಾನೂನು ಪಾಲನೆಯಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.