ಸೇಡಂ(ಕಲಬುರಗಿ ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಕಲಬುರಗಿಗೆ ತೆರಳುತ್ತಿದ್ದ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹಾಗೂ ರೈತರನ್ನು ಮಳಖೇಡ ಠಾಣೆಯ ಪೊಲೀಸರು ಮಾರ್ಗ ಮಧ್ಯದಲ್ಲಿ ಮಂಗಳವಾರ ತಡೆದಿದ್ದಾರೆ.
ಸೇಡಂನಿಂದ ಕಲಬುರಗಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಭಾಗದ ರೈತರ ಸಮಸ್ಯೆ ಕುರಿತು ಮನವಿ ಸಲ್ಲಿಸಲು ಕಲಬುರಗಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಮಳಖೇಡ ಬಳಿ ಪೊಲೀಸರು ತಡೆದಿದ್ದಾರೆ.
ಈ ಸಂದರ್ಭದಲ್ಲಿ ರೈತರು ರಸ್ತೆ ಮೇಲೆ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಮಲ್ಲಿಕಾರ್ಜುನ ಕೊಡದೂರ, ಅಯ್ಯಣಗೌಡ ತೇಲ್ಕೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.