ಕಲಬುರಗಿ: ಸೇಡಂನ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ಅಂಚೆ ಇಲಾಖೆಯು ವಿಶೇಷ ಲಕೋಟೆಯನ್ನು ಬಿಡುಗಡೆಗೊಳಿಸಿದೆ.

ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಲಬುರಗಿ ವಿಭಾಗೀಯ ಅಂಚೆ ಅಧೀಕ್ಷಕ ಆರ್. ಅಶೋಕ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಶಾಲೆ ಸಾಮಾಜಿಕ ಪರಿವರ್ತನೆಯ ಕೇಂದ್ರವಾಗಬೇಕು ಎಂಬ ಆಶಯದೊಂದಿಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ಭಾರತ ವಿಕಾಸ ಸಂಗಮ, ಭಾರತ ವಿಕಾಸ ಅಕಾಡೆಮಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ’ ಎಂದು ಶ್ಲಾಘಿಸಿದರು.

ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿಯ ಜಂಟಿ ಕಾರ್ಯದರ್ಶಿ ಸದಾನಂದ ಬೂದಿ, ಸಹಾಯಕ ಅಂಚೆ ಅಧೀಕ್ಷಕ ಲಕ್ಷ್ಮಿಕಾಂತ ಕೊಡ್ಲಿ, ಪ್ರಧಾನ ಅಂಚೆ ಪಾಲಕ ವಿದ್ಯಾಧರ ಗೋಟೂರು ಮಾತನಾಡಿದರು. ಅಂಚೆ ನಿರೀಕ್ಷಕ ಮಲ್ಲಿಕಾರ್ಜುನ ಕಲಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವಿನಿ ಗರುಡಕರ ಸ್ವಾಗತಿಸಿದರು. ಚಂದ್ರಶೇಖರ ನಿಂಗಡೆ ವಂದಿಸಿದರು. ಅಂಚೆ ಮೇಲ್ವಿಚಾರಕ ರಾಹುಲ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.