ಗುರುವಾರ , ಮೇ 6, 2021
23 °C

ಕಲಬುರ್ಗಿಯಲ್ಲಿ ನಟ ಪುನೀತ್ ಅಭಿಮಾನಿಗಳಿಗೆ ಲಾಠಿ ರುಚಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಕಲಬುರ್ಗಿ: ಯುವರತ್ನ ಚಲನಚಿತ್ರದ ಪ್ರಚಾರಕ್ಕಾಗಿ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲು ಬರುತ್ತಿರುವ ಚಿತ್ರ ನಟ ಪುನೀತ್ ರಾಜಕುಮಾರ್ ಅವರನ್ನು ಕಾಣಲು ಬಂದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.

ಶ್ರೀಮಠದ ಎದುರಿಗೆ ಇರುವ ರಸ್ತೆಯ ಪಕ್ಕದಲ್ಲಿ ನಿಂತಿರುವ ಯುವಕ-ಯುವತಿಯರಿಗೆ ಪೊಲೀಸರು ಲಾಠಿ ಬೀಸಿದರು. ಇದರಿಂದ ಅಲ್ಲಿದ್ದವರು ಕಂಗಾಲಾಗಿ ಓಡಿ ಹೋದರು.

ಚಿತ್ರದ ಪ್ರಚಾರಕ್ಕಾಗಿ ನಗರದ ಏಷಿಯನ್ ಮಾಲ್ ಬಳಿ ಶಾಮಿಯಾನ ಹಾಕಲಾಗಿತ್ತು. ಆದರೆ ಕೊರೊನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ.

ಇದರಿಂದಾಗಿ ಚಿತ್ರನಟ ಪುನೀತ್ ರಾಜಕುಮಾರ್ ಹಾಗೂ ‌ಚಿತ್ರ ತಂಡ ದೇವಸ್ಥಾನಕ್ಕೆ ಭೇಟಿ ನೀಡಿ ಡಾ. ಶರಣಬಸವಪ್ಪ ಅಪ್ಪ ಅವರನ್ನು ಭೇಟಿ ‌ಮಾಡಿ ಆಶೀರ್ವಾದ ಪಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು