ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಪ್ರಕಾಶ್ ದೇವರಾಜು ಕಲಬುರಗಿಯ ನೂತನ ಎಸ್ಪಿ

Published 1 ಫೆಬ್ರುವರಿ 2024, 15:48 IST
Last Updated 1 ಫೆಬ್ರುವರಿ 2024, 15:48 IST
ಅಕ್ಷರ ಗಾತ್ರ

ಕಲಬುರಗಿ: 2014ನೇ ವೃಂದದ ಐಪಿಎಸ್ ಅಧಿಕಾರಿ ಶಿವಪ್ರಕಾಶ್ ದೇವರಾಜು ಅವರನ್ನು ಕಲಬುರಗಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ಶಿವಪ್ರಕಾಶ್ ದೇವರಾಜು ಅವರು ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿದ್ದರು.

ಹಾಲಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರನ್ನು ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.

ನಾಲ್ಕೇ ತಿಂಗಳಲ್ಲಿ ವರ್ಗಾವಣೆ: ಅಡ್ಡೂರು ಶ್ರೀನಿವಾಸಲು ಅವರು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ನಾಲ್ಕೇ ತಿಂಗಳಲ್ಲಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಡ್ಡೂರು ಶ್ರೀನಿವಾಸಲು ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶ್ರೀನಿವಾಸಲು ಅವರು ಎಸ್ಪಿಯಾಗುವುದಕ್ಕೂ ಮುನ್ನ ಕಲಬುರಗಿ ಕಮಿಷನರೇಟ್ ನಲ್ಲಿ ಎರಡು ವರ್ಷ ಡಿಸಿಪಿಯಾಗಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT