ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11ರಂದು ಪ್ರತಿಭಾ ಪುರಸ್ಕಾರ

Last Updated 7 ನವೆಂಬರ್ 2018, 11:14 IST
ಅಕ್ಷರ ಗಾತ್ರ

ಕಲಬುರ್ಗಿ: ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ ನ.11ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪಾಟೀಲ, ‘2016–17 ಮತ್ತು 2017–18ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಗಳಿಸಿದ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ 150 ವಿದ್ಯಾರ್ಥಿಗಳನ್ನು ಸತ್ಕರಿಸಲಾಗುವುದು. ತಲಾ ₹2 ಸಾವಿರ, ಬೆಳ್ಳಿಯ ಲಿಂಗದ ಕಾಯಿ ಮತ್ತು ಲಿಂಗವನ್ನು ಕೊಡಲಾಗುವುದು’ ಎಂದರು.

‘ಮಾದನಹಿಪ್ಪರಗಾದ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡುವರು. ಯಾದಗಿರಿ ಮತ್ತು ಕಲಬುರ್ಗಿಯಲ್ಲ ಎಲ್ಲಾ ಶಾಸಕರು ಪಾಲ್ಗೊಳ್ಳುವರು ಎಂದು’ ತಿಳಿಸಿದರು.

ಜಿಲ್ಲಾ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಡಾ. ಶ್ರೀಶೈಲ ಘೂಳಿ, ಕಲ್ಯಾಣಪ್ಪ ಪಾಟೀಲ ಮಳಖೇಡ, ಎಸ್.ವಿ.ಮಠಪತಿ, ಸುರೇಶ ಪಾಟೀಲ ಜೋಗೂರ, ಪ್ರಕಾಶ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT