ಭಾನುವಾರ, ಸೆಪ್ಟೆಂಬರ್ 19, 2021
31 °C
ಪತ್ರಿಕಾ ದಿನಾಚರಣೆಯಲ್ಲಿ

‘ಪತ್ರಿಕಾ ಭವನ ನಿರ್ಮಾಣ ಶೀಘ್ರ’: ಶಾಸಕ ಎಂ.ವೈ.ಪಾಟೀಲ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ: ಪ್ರಜಾಪ್ರಭುತ್ವದ ಯಶಸ್ವಿಗೆ ಮಾಧ್ಯಮಗಳ ಪಾತ್ರ ಅಪಾರವಾದುದು.ಎಲ್ಲ ಕ್ಷೇತ್ರಗಳ ಚಿತ್ರಣ ತಿಳಿಸಿ ಅರಿವು ಮೂಡಿಸುವ ಕಾರ್ಯ ಗಳನ್ನು ಮಾಧ್ಯಮ ಮಾಡಬೇಕು ಎಂದು ಶಾಸಕ ಎಂ.ವೈ.ಪಾಟೀಲ ತಿಳಿಸಿದರು.

ಪಟ್ಟಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನೆರವಿಗೆ ನಿಲ್ಲಬೇಕು. ಯುವ ಪತ್ರಕರ್ತರು ಹಿರಿಯ ಪತ್ರಕರ್ತರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಪತ್ರಿಕಾ ಭವನ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್ ಠಾಕೂರ ಮಾತನಾಡಿದರು. ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.

ವಿವಿಧ ಕ್ಷೇತ್ರಗಳಸಾಧಕರಿಗೆ ಹಾಗೂ ಪತ್ರಿಕಾ ವಿತರಿಕರಿಗೆ ಸನ್ಮಾನಿಸಲಾಯಿತು.

ಪತ್ರಿಕಾ ಭವನ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ವಗ್ಗೆ, ಪತ್ರಕರ್ತ ಗುಂಡುರಾವ್ ಶಾಸಕರಿಗೆ ಮನವಿ ಸಲ್ಲಿಸಿದರು.

ಪುರಸಭೆ ಅಧ್ಯಕ್ಷೆ ರೇಣುಕಾ ಪಾಟೀಲ, ಮುಖಂಡರಾದ ದೇವಿಂದ್ರಪ್ಪ ಅವಂಟಿ, ದೇವಿಂದ್ರಪ್ಪ ಕಪನೂರ, ಹನುಮಂತರಾವ್ ಬೈರಾಮಡಗಿ, ರಾಜಕುಮಾರ ದೇಶಮುಖ, ಸಿಪಿಐ ಜಗದೇವಪ್ಪ ಪಾಳಾ, ಮತೀನ ಪಟೇಲ್, ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ, ಮಹಾಂತೇಶ ಪಾಟೀಲ, ಬಸವರಾಜ ಚಾಂದಕವಟೆ, ಮಂಜೂರ ಅಹ್ಮದ ಅಗರಖೇಡ, ಶೈಲೇಶ್ ಗುಣಾರಿ, ಶ್ರೀಶೈಲ ಬಳೂರ್ಗಿ, ರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.