ಬುಧವಾರ, ಜನವರಿ 20, 2021
26 °C

ಕಲಬುರ್ಗಿ ಕೇಂದ್ರ ಕಾರಾಗೃಹದಿಂದ ಕೈದಿ ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ತಾಲ್ಲೂಕಿನ ನಂದಿಕೂರ ಗ್ರಾಮದ ಬಳಿ ಇರುವ ಕೇಂದ್ರ ಕಾರಾಗೃಹದ ಕೈದಿಯನ್ನು ಕೃಷಿ ಕೆಲಸಕ್ಕೆ ಕಳುಹಿಸಿದ್ದಾಗ ಸೋಮವಾರ  ಪರಾರಿಯಾಗಿದ್ದಾನೆ.

ಚಿಂಚೋಳಿ ತಾಲ್ಲೂಕಿನ ಗಡಿಲಿಂಗದಳ್ಳಿ ಗ್ರಾಮದ ರಮೇಶ ವಡ್ಡರ (30) ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. 

ಜೈಲಿನ ಹೊರಭಾಗದಲ್ಲಿರುವ ಜಮೀನಿನಲ್ಲಿ ತೊಗರಿ ರಾಶಿ ಮಾಡಲು ರಮೇಶನನ್ನು ಕಳಿಸಲಾಗಿತ್ತು. ಈ ಸಂದರ್ಭದಲ್ಲಿ ಬಹಿರ್ದೆಸೆಗೆ ಹೋಗಿ ಬರುತ್ತೇನೆ ಎಂದು ನೆಪ‌ ಹೇಳಿ‌ ತೆರಳಿದವನು ಎಷ್ಟೊತ್ತಾದರೂ ಬಂದಿಲ್ಲ. ಇದರಿಂದ ಅನುಮಾನಗೊಂಡ ಸಿಬ್ಬಂದಿ ಹುಡುಕಾಟ ನಡೆಸಿದಾಗ ತಪ್ಪಿಸಿಕೊಂಡಿರುವುದು ಗೊತ್ತಾಗಿದೆ.

ಈ ಸಂಬಂಧ ಪರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು