ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಇತರೆ ಜಿಲ್ಲೆ, ಹೊರ ರಾಜ್ಯಗಳಿಗೆ ತೆರಳುವ ಖಾಸಗಿ ಬಸ್ ಸೇವೆ ಸ್ಥಗಿತ

Last Updated 18 ಮಾರ್ಚ್ 2020, 10:51 IST
ಅಕ್ಷರ ಗಾತ್ರ

ಕಲಬುರ್ಗಿ: ರಾಜ್ಯದ ರಾಜಧಾನಿ ಬೆಂಗಳೂರು, ಇತರೆ ಜಿಲ್ಲೆಗಳು ಸೇರಿದಂತೆ ಹಾಗೂ ಹೊರರಾಜ್ಯಗಳಿಗೆ ಹೋಗುವ ಎಲ್ಲಾ ಖಾಸಗಿ ಬಸ್‌ಗಳ ಓಡಾಟ ಇಂದಿನಿಂದಲೇ ಬಂದ್ ಆಗುತ್ತದೆ ಎಂದು ಜಿಲ್ಲಾಧಿಕಾರಿ ಶರತ್.ಬಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಿಗೆ ತೆರಳುವ ಬಸ್‌ಗಳು ಸೇರಿ ಬುಕ್ಕಿಂಗ್ ಮಾಡಿರುವ ಟಿಕೆಟ್ ರದ್ದುಮಾಡುವಂತೆ ಬಸ್ ಮಾಲೀಕರು ಮತ್ತು ಏಜಂಟರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ಆದೇಶ ನೀಡುವವರೆಗೂ ಈ ಆದೇಶ ಪಾಲಿಸಲು ಸೂಚಿಸಿದ್ದಾರೆ.

ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಖಾಸಗಿ ಟ್ರಾವೆಲರ್ಸ್‌‌ ಮತ್ತು ಬುಕ್ಕಿಂಗ್ ಏಜೆಂಟರ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT